ಮತ್ತೇ ಚಿರತೆ ದಾಳಿಗೆ ಕರು ಬಲಿ : ಕೆವಿಎನ್ ದೊಡ್ಡಿ ಗ್ರಾಮದಲ್ಲಿ ಮೂಡಿದ ಆತಂಕ

ವರದಿ-ಶಾರುಕ್ ಖಾನ್, ಹನೂರು 

ಹನೂರು : ದನ ಮೇಯಿಸಲು ಹೋಗಿದ್ದ ಗೋವಿಂದಯ್ಯ ಎಂಬ ವ್ಯಕ್ತಿಯನ್ನು ಚಿರತೆಯೊಂದು ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ, ಮತ್ತೆ ಚಿರತೆ ದಾಳಿಗೆ ಕರು ಬಲಿಯಾಗಿರುವ ಘಟನೆ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಶುಕ್ರವಾರ ತಡರಾತ್ರಿ ಸತ್ತಾರು ಮೇಡು ಗ್ರಾಮದ ವರ್ವ ರೈತನಿಗೆ ಸೇರಿದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಇದರಿಂದ ಸುತ್ತಲಿನ ಗ್ರಾಮಸ್ಥರು ಮತ್ತಷ್ಟು ಭಯಭೀತರಾಗಿದ್ದು, 
ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕಳೆದ ಸೆಪ್ಟಂಬರ್ 22 ರಂದು ಜಾನುವಾರು ಮೇಯಿಸಲು ಹೋಗಿದ್ದ ಕೆವಿ ಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಎಂಬುವವರು ಚಿರತೆ ದಾಳಿಗೆ ತುತ್ತಾಗಿ ಮೃತ ಪಟ್ಟಿದ್ದರು. ಈ ವೇಳೆ ಗ್ರಾಮಸ್ಥರು ಚಿರತೆಯನ್ನು ಹಿಡಿದು ಬೇರೆ ಕಡೆ ಬಿಡುವಂತೆ ಅರಣ್ಯ ಇಲಾಖೆಗೆ ಮನವಿಯನ್ನೂ ಮಾಡಿದ್ದರು. ಇದರಿಂದ ಚಿರತೆ ಚಲನವಲನ ಗಮನಿಸಲು ವಿವಿಧ ಪ್ರದೇಶಗಳಲ್ಲಿ ಅರಣ್ಯ ಇಲಾಖೆಯವರು ಸಿಸಿ ಕ್ಯಾಮೆರಾ ಅಳವಡಿಸಿದ್ದರಲ್ಲದೇ ಚಿರತೆ ಸೆರೆಗೆ ಬೋನುಗಳನ್ನು ಸಹ ಇಟ್ಟಿದ್ದರು.

 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು