ರಾಜ್ಯ ಸರ್ಕಾರಿ ನೌಕರರ ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳ


 ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, “ಇದಕ್ಕಾಗಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ” ಎಂದಿದ್ದಾರೆ.

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಮತ್ತು ಡಿಆರ್ ಅನ್ನು ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ ಅನುಮೋದನೆ ನೀಡಿತ್ತು. ಅದರ ಬೆನ್ನಿಗೇ ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು