ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ : ಸಚಿವ ಶ್ರೀರಾಮುಲು ವಾಗ್ದಾಳಿ
ಅಕ್ಟೋಬರ್ 27, 2022
ಮೈಸೂರು : ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಲ್ಲ ಎಂದು ಸಾರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು. ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಶ್ರೀನಿವಾಸ್ ಪ್ರಸಾದ್ ಮೊದಲಾದ ಘಟಾನುಘಟಿ ದಲಿತ ನಾಯಕರನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ಮುಗಿಸಿದರು ಎಂದು ಕಿಡಿಕಾರಿದರು. ಎಸ್.ಸಿ ಹಾಗೂ ಎಸ್.ಟಿ.ಮೀಸಲಾತಿ ಅನುμÁ್ಠನ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕ್ರೆಡಿಟ್ ವಾರ್ ಬಗ್ಗೆ ಮಾತನಾಡಿ, ಮೀಸಲಾತಿ ಹೆಚ್ಚಳ ಸಂಬಂಧ ಯಾರ ಕಾಲದಲ್ಲೋ ಸಮಿತಿ ರಚನೆ ಆಗಿರಬಹುದು. ಆದರೆ ಅನುಷ್ಟಾನಕ್ಕೆ ತಂದಿರುವುದು ನಮ್ಮ ಸರಕಾರ ಎಂದರು. ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿದೆ. ನಮಗೆ ರಾಜಕೀಯ ಇಚ್ಛಾಶಕ್ತಿ ಇರುವುದರಿಂದ ಮೀಸಲಾತಿ ಹೆಚ್ಚಳ ಅನುμÁ್ಠನಕ್ಕೆ ತಂದಿದ್ದೇವೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಮೀಸಲಾತಿ ಹೆಚ್ಚಳ ಅನುಷ್ಟಾನಗೊಂಡಿದೆ ಎಂದು ಹೇಳಿದರು. ಕಾಂಗ್ರೆಸ್ಸಿನಿಂದ ಹಿಂದುಳಿದ ವರ್ಗಗಳಿಗೆ ನ್ಯಾಯ ಸಿಕ್ಕಿಲ್ಲ, ಸಿಗುವುದೂ ಇಲ್ಲ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ವೇಳೆ ಕಾಡುಗೊಲ್ಲ ಸಮುದಾಯಕ್ಕೆ ಅಪಮಾನ ಮಾಡಲಾಗಿದೆ. ರಾಹುಲ್ ಗಾಂಧಿ ಭೇಟಿ ಮಾಡಿ, ಸಂವಾದಕ್ಕೆ ಮುಂದಾಗಿದ್ದ ಕಾಡುಗೊಲ್ಲರಿಗೆ ತಡೆಯೊಡ್ಡಲಾಗಿದೆ. ಕಾಡುಗೊಲ್ಲರು ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಅಡ್ಡಿಪಡಿಸಲಾಗಿದೆ. ಇದು ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ವಿರೋಧಿತನಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಎಸ್‍ಸಿ, ಎಸ್‍ಟಿ ಬಳಿಕ ಉಳಿದ ಸಮುದಾಯಗಳಿಂದ ಮೀಸಲಾತಿಗೆ ಬೇಡಿಕೆ ವಿಚಾರವಾಗಿ ಮಾತನಾಡಿ, ಯಾವುದೇ ಸಮುದಾಯವನ್ನು ಮೀಸಲಾತಿಗೆ ಸೇರಿಸಲು ನಮ್ಮ ಅಭ್ಯಂತರವಿಲ್ಲ. ಮೀಸಲಾತಿ ಅನುμÁ್ಠನಕ್ಕೂ ಮುನ್ನ ಸಂಬಂಧಪಟ್ಟ ಜಾತಿಯ ಕುಲಶಾಸ್ತ್ರ ಅಧ್ಯಯನ ನಡೆಯಬೇಕು. ಮೀಸಲಾತಿ ಅನುಷ್ಟಾನಕ್ಕಾಗಿ ಸಮಿತಿಯನ್ನು ರಚಿಸಬೇಕು. ಆ ಸಮಿತಿ ನೀಡುವ ವರದಿಯನ್ವಯ ಮುಂದಿನ ಕ್ರಮ ಕೈಗೊಳ್ಳಬೇಕು.ಏಕಾಏಕಿ ಮೀಸಲಾತಿ ಅನುμÁ್ಠನ ಹೆಚ್ಚಳ ಸಾಧ್ಯವಿಲ್ಲ. ಎಸ್.ಸಿ.ಎಸ್.ಟಿ ಮೀಸಲಾತಿ ಹೆಚ್ಚಳ ಸಂಬಂಧ ಹಲವು ದಶಕಗಳಿಂದ ಹೋರಾಟ ನಡೆದಿತ್ತು. ಹಲವು ದಶಕಗಳ ಹೋರಾಟದ ಬಳಿಕ ಮೀಸಲಾತಿ ಹೆಚ್ಚಳ ಅನುಷ್ಟಾನ ಮಾಡಲಾಗಿದೆ ಎಂದರು. ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಪ್ರಸ್ತಾಪವಿಲ್ಲ: ರಾಜ್ಯದಲ್ಲಿ ಸದ್ಯಕ್ಕೆ ಸಾರಿಗೆ ಟಿಕೆಟ್ ದರವನ್ನು ಹೆಚ್ಚಳ ಮಾಡುವುದಿಲ್ಲ. ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ಬಸ್ಸುಗಳ ನಿಯೋಜನೆ ಮಾಡಲು ಆದ್ಯತೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್ಸುಗಳನ್ನು ಸೇವೆಗೆ ಸಮರ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
0 ಕಾಮೆಂಟ್‌ಗಳು