ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಖರ್ಗೆ ಪಡೆದ ಮತಗಳು 7897

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಬಾರಿಸಿದ್ದಾರೆ. ಪ್ರತಿಸ್ಫರ್ಧಿ ಶಶಿ ತರೂರ್ ಸೋಲನುಭವಿಸಿದ್ದಾರೆ.
ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿ ಚುನಾವಣೆ ನಡೆದಿದೆ. ಹಾಗೆಯೇ 22 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ದೊರಕಿದೆ.
ಮಲ್ಲಿಕಾರ್ಜುನ ಖರ್ಗೆ ಅವರು 7897 ಮತ ಪಡೆದುಕೊಂಡರೆ, ಪ್ರತಿಸ್ಫರ್ಧಿ ಶಶಿ ತರೂರ್ 1300 ಮತ ಪಡೆದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ 96ರಷ್ಟು ಮತದಾನವಾಗಿತ್ತು. 9,915 ಪ್ರತಿನಿಧಿಗಳ ಪೈಕಿ 9,500 ಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸಿದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು