ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನತೆಗೆ ತಿಳಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ : ಕಾರ್ಯಕರ್ತರಿಗೆ ಶಾಸಕ ಡಾ.ಯತೀಂದ್ರ ಕರೆ
ಅಕ್ಟೋಬರ್ 30, 2022
ಮೈಸೂರು : ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳು ಹಾಗೂ ಸರ್ಕಾರದ ವೈಫಲ್ಯಗಳನ್ನು ಜನತೆಗೆ ತಿಳಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಅಧಿಕಾರಕ್ಕೆ ತರಲು ಶ್ರಮವಹಿಸಬೇಕು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕಾರ್ಯಕರ್ತರು ಹಾಗೂ ಮುಖಂಡರುಗಳಿಗೆ ಕರೆ ನೀಡಿದರು. ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ವರುಣ ವಿಧಾನಸಭಾ ಕ್ಷೇತ್ರದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗಳ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೂತನವಾಗಿ ಆ0iÉ್ಕುಯಾದ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಪಕ್ಷದ ಬಾವುಟ ನೀಡಿ ಮಾತನಾಡಿದರು. ಬಿಜೆಪಿ ಸರ್ಕಾರದ ವೈಫಲ್ಯಗಳು, ಜನ ವಿರೋದಿ ನೀತಿಗಳನ್ನು ಜನರಿಗೆ ತಿಳಿಸಬೇಕು. ಅವರು ಜಾತಿ ಧರ್ಮದ ಮೂಲಕ ನಮ್ಮ ನಮ್ಮಲ್ಲೇ ಒಡಕುಂಟು ಮಾಡಿ ಮತೀಯ ಭಾವನೆ ಹುಟ್ಟು ಹಾಕಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಅವರ ವೈಫಲ್ಯಗಳನ್ನು ಜನತೆಯ ಮುಂದಿಟ್ಟು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರನ್ನೂ ಒಗ್ಗೂಡಿಸಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮೈಸೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಬಿ.ಜೆ. ವಿಜಯ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಬಿ.ಮಲ್ಲೇಶ್, ಕಾಂಗ್ರೆಸ್ ವಕ್ತಾರ ಹುಣಸೂರು ಬಸವಣ್ಣ, ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕೆ.ಮುದ್ದೇಗೌಡ, ಲಲಿತಾದ್ರಿಪುರ ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಸಂಘಟನಾ ಕಾರ್ಯದರ್ಶಿ ಪ್ರಭು, ಕೆಪಿಸಿಸಿ ಸದಸ್ಯ ಎನ್.ಭಾಸ್ಕರ್, ಹೆಡತಲೆ ಮಂಜುನಾಥ್, ನೂತನ ಅಧ್ಯಕ್ಷ ತೇಜ ಉಪಾಧ್ಯಕ್ಷ ಪುಟ್ಟಮಾದೇಗೌಡ, ವಕೀಲರಾದ ಶಿವಪ್ರಸಾದ್, ಮೈಸೂರು ಬಸವಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು