ಹನೂರು : ನಾಳೆ ಹನೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸುವ ಹಿನ್ನಲೆ ಬಿಜೆಪಿ ಮುಖಂಡರುಗಳು ಇಂದು ಕಾರ್ಯಕ್ರಮ ನಡೆಯುವ ವೇದಿಕೆಯ ಸ್ಥಳ ಪರಿಶೀಲನೆ ನಡೆಸಿದರು. ಪಟ್ಟಣದ ಆರ್ ಎಸ್ ದೊಡ್ಡಿಯ ಗೌರಿ ಶಂಕರ ಕಲ್ಯಾಣ ಮಂಟಪ ಸಮೀಪ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ದತ್ತೇಶ್ ಕುಮಾರ್ ಹಾಗೂ ಒಬಿಸಿ ಜಿಲ್ಲಾ ಸಂಯೋಜಕ ಬಿ ವೆಂಕಟೇಶ್ ಇಂದು ಸ್ಥಳ ಪರಿಶೀಲನೆ ನಡೆಸಿದರು. ಪಕ್ಷ ಸಂಘಟನೆ ಸಂಬಂಧ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸ್ಥಳೀಯ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಅವರ ಸ್ವಾಗತಕ್ಕೆ ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಈ ವೇಳೆ ಬಿಜೆಪಿ ಹನೂರು ಮಂಡಲ ಅಧ್ಯಕ್ಷ ಸಿದ್ದಪ್ಪ, ಎಸ್‍ಟಿ ಮೋರ್ಚಾ ಪ್ರದಾನ ಕಾರ್ಯದರ್ಶಿ ನಾಗರಾಜು, ರಾಮಪುರ ನಾಗರಾಜು, ಲೋಕೇಶ್ ಜೆಟ್ಟಿ, ರಾಮಚಂದ್ರ, ಅಪ್ಪು ಇದ್ದರು.
0 ಕಾಮೆಂಟ್‌ಗಳು