ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ಜರುಗಿದ ದೀಪಾವಳಿ ರಥೋತ್ಸವ

ವರದಿ-ಶಾರುಕ್ ಖಾನ್, ಹನೂರು

ಹನೂರು : ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ರಥೋತ್ಸವ ಬುಧವಾರ ಅದ್ಧೂರಿಯಾಗಿ ಜರುಗಿತು.
ಬುಧವಾರ ಬೆಳಗ್ಗೆ ಶುಭ ಲಗ್ನದಲ್ಲಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಾಲೂರು ಮಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿ ದಿವ್ಯಸಾನಿಧ್ಯದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿದೇವಿ ರವರ ಮೇಲುಸ್ತುವಾರಿಯಲ್ಲಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ರಾಜ್ಯದ ವಿವಿದೆಡೆಗಳಿಂದ ಅಲ್ಲದೆ ನೆರೆ ರಾಜ್ಯದಿಂದಲೂ ಲಕ್ಷಾಂತರ ಭಕ್ತರು ಆಗಮಿಸಿ ರಥೋತ್ಸವದಲ್ಲಿ ಪಾಲ್ಗೊಂಡು ಕಣ್ತುಂಬಿಸಿಕೊಂಡರು. ಕೋವಿಡ್ ಮುಕ್ತವಾದ ಬಳಿಕ ನಡೆದ ಅದ್ದೂರಿ ರತೋತ್ಸವ ಕಾಣಲು ಮಲೆ ಮಹದೇಶ್ವರರ ಭಕ್ತಗಣ ಕಾತುರದಿಂದ ಕಾಯುತ್ತಿತ್ತು. ಬುಧವಾರ ನಡೆದ ರಥೋತ್ಸವವನ್ನು ಕಂಡು ಪುನೀತರಾದರು.

ಬಿಗಿಯಾದ ಪೊಲೀಸ್ ಬಂದೂಬಸ್ತ್ ಮಾಡಲಾಗಿತ್ತು. ಹನೂರು ಶಾಸಕ ಆರ್ ನರೇಂದ್ರ, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು