ವರದಿ-ಟಿ.ಬಿ.ಸಂತೋಷ, ಮದ್ದೂರು
ಮದ್ದೂರು : ತಾಲೂಕಿನ ನಾಡ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜಯಂತಿಯನ್ನು ಆಚರಿಸಲಾಯಿತು
ಉಪ ತಹಶೀಲ್ದಾರ್ ಶಿವಲಿಂಗಯ್ಯ ಇಬ್ಬರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಭಾರತದ ಸ್ವಾತಂತ್ರ‍್ಯ ಹೋರಾಟದಲ್ಲಿ ಅಗ್ರಗಣ್ಯ ನಾಯಕತ್ವ ವಹಿಸಿ ಬ್ರಿಟಿಷರಿಂದ ಭಾರತೀಯರಿಗೆ ಸ್ವಾತಂತ್ರ‍್ಯ ದೊರಕಿಸಿಕೊಟ್ಟ ಧೀಮಂತ ಹೋರಾಟಗಾರರಾದ ಮಹಾತ್ಮಾ ಗಾಂಧೀಜಿಯವರು ತಮ್ಮ ಅಹಿಂಸಾ ಮಾರ್ಗದಿಂದ ಸ್ವಾತಂತ್ರ‍್ಯ ಚಳುವಳಿ ರೂಪಿಸಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಅಲ್ಲದೆ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸರಳತೆಯ ಮೂಲಕ ಉತ್ತಮ ಆಡಳಿತ ನೀಡಿ ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ಜೆ.ರವಿ, ಸಹಾಯರಾದ ಆನಂದ್, ಸ್ವಾಮಿ, ನಿಂಗರಾಜು, ರಾಜೇಶ್, ಕರಡಕೆರೆ ಯೋಗೇಶ್, ಶಿವಣ್ಣ, ಕಿರಣ, ತಮ್ಮಯ್ಯ, ಸ್ವಾಮಿ, ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು