ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ : ಕಾರ್ಯಕ್ರಮಕ್ಕೆ ಚಕ್ಕರ್ ಹೊಡೆದರೆ ಶಿಸ್ತು ಕ್ರಮ : ಶಾಸಕ ಆರ್.ನರೇಂದ್ರ
ಅಕ್ಟೋಬರ್ 27, 2022
ಅತಿ ಹೆಚ್ಚು ಅಂಕಗಳಿಸಿದ ವಿಧ್ಯಾರ್ಥಿಗಳಿಗೆ ಸನ್ಮಾನ
ವರದಿ-ಶಾರುಕ್ ಖಾನ್, ಹನೂರು
ಹನೂರು : ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲು ಸರ್ಕಾರದಿಂದ ತೀರ್ಮಾನಿಸಲಾಗಿದ್ದು, ಅದರಂತೆ ಹನೂರಿನಲ್ಲೂ ಅದ್ಧೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದು ಶಾಸಕ ಅರ್.ನರೇಂದ್ರ ಹೇಳಿದರು. ಪಟ್ಟಣದ ಲೋಕೋಪಯೋಗಿ ಸಭಾಂಗಣದಲ್ಲಿ ಅಯೋಜಿಸಿದ ಕನ್ನಡ ರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು. ಜತೆಗೆ ಪ್ರತಿಭಾವಂತ ಮಕ್ಕಳು, ಕನ್ನಡದಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೂ ಗೌರವಿಸಲಾಗುವುದು. ಎಲ್ಲ ಸಂಘ ಸಂಸ್ಥೆಗಳ ಅಭಿಪ್ರಾಯವನ್ನು ಸಹ ಪಡೆಯಲಾಗುವುದು. ಸರ್ಕಾರದಿಂದ ಹೆಚ್ಚು ಅನುದಾನ ಸಿಕ್ಕಿಲ್ಲ. ಕಾರ್ಯಕ್ರಮಕ್ಕೆ ಗೈರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಕೋವಿಡ್ ನಿಂದಾಗಿ ಎರಡು ವರ್ಷ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಣೆ ಮಾಡಲಿಲ್ಲ. ಆಯಾ ಇಲಾಖೆ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು. ಕೋವಿಡ್ ನಿಂದ ಮೃತರಾದ ಕುಟುಂಬಗಳಿಗೆ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ಕಾಂಗ್ರೆಸ್ ಸರ್ಕಾರ ನೀಡಿದ ಆಶ್ರಯ ಯೋಜನೆಯ ಮನೆಗಳ ಅನುದಾನವನ್ನು ಸಹ ಬಿಡುಗಡೆ ಮಾಡಿಲ್ಲ ಈ ಬಗ್ಗೆ ನಾನು ಈಗಾಗಲೇ ಸಚಿವರಿಗೆ ತಿಳಿಸಿದ್ದೇನೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ತಹಸೀಲ್ದಾರ್ ಆನಂದಯ್ಯ, ಕೃಷಿ ಇಲಾಖೆ ಸುಂದ್ರಮ್ಮ, ಪಂಪ ಮುಖ್ಯಧಿಕಾರಿ ಮೂರ್ತಿ, ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್, ಮಹೇಶ್, ಅಗ್ನಿ ಶಾಮಕ ದಳದ ಕಾರ್ತಿಕ್, ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ, ಕನ್ನಡ ಸಂಘಟನೆಯವರಾದ ವಿನೋದ್ ಮತ್ತಿತರರು ಹಾಜರಿದ್ದರು.
0 ಕಾಮೆಂಟ್‌ಗಳು