ಕೆವಿಎನ್ ದೊಡ್ಡಿ ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಜಾನುವಾರುಗಳ ಮೇಲೆ ದಾಳಿ

 ವರದಿ-ಶಾರುಕ್ ಖಾನ್, ಹನೂರು 

ಹನೂರು : ತಾಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷಗೂಂಡು ಜಾನುವಾರುಗಳ ಮೇಲೆ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. 
ಹನೂರು ತಾಲೂಕಿನ ಎಲ್ಲೆಮಾಳ ಗ್ರಾಪಂ ವ್ಯಾಪ್ತಿಯ ಕೆವಿಎನ್ ದೊಡ್ಡಿ ಗ್ರಾಮದ ಮುರುಗೇಶ್ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಚಿರೆತೆ ದಾಳಿ ನಡೆಸಿದೆ. ಸೋಮವಾರ ರಾತ್ರಿ ಇಲ್ಲಿನ ಗ್ರಾಮಸ್ಥರು ಚಿರತೆಯನ್ನು ಪ್ರತ್ಯಕ್ಷವಾಗಿ ಕಂಡಿರುವುದಾಗಿ ಹೇಳಿದ್ದಾರೆ. ಘಟನೆಯಿಂದ ಗ್ರಾಮಸ್ಥರು ತೀವ್ರವಾಗಿ ಆತಂಕಗೊಂಡಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು