ಹಾಡ ಹಗಲೇ ಚಿರತೆ ದಾಳಿಗೆ ಯುವಕ ಬಲಿ

ಮದ್ಗರಲಿಂಗಯ್ಯನ ಹುಂಡಿ ಗ್ರಾಮದ ಮಂಜುನಾಥ್ (20) ಮೃತ ದುರ್ದೈವಿ

ತಿ.ನರಸೀಪುರ : ಚಿರತೆ ದಾಳಿಗೆ ಯುವಕನೊಬ್ಬ ಬಲಿಯಾಗಿರುವ ಘಟನೆ ತಾಲ್ಲೂಕಿನ ಉಕ್ಕಲಗೆರೆ ಮಲ್ಲಿಕಾರ್ಜುನಸ್ವಾಮಿ ಬೆಟ್ಟದ ಬಳಿ ಸೋಮವಾರ ಸಂಜೆ ನಡೆದಿದೆ.
ಟಿ.ನರಸೀಪುರ ತಾಲ್ಲೂಕಿನ ಮದ್ಗರಲಿಂಗಯ್ಯನ ಹುಂಡಿ ಗ್ರಾಮದ  ಮಂಜುನಾಥ್ (20) ಚಿರತೆ ದಾಳಿಗೆ ಬಲಿಯಾದ ಯುವಕ. 
ಈತ ಉಕ್ಕಲಗೆರೆ ಮಲ್ಲಿಕಾರ್ಜುನಸ್ವಾಮಿ ಬೆಟ್ಟಕೆ ಹೊಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದನು. ದೇವಸ್ಥಾನದಿಂದ ಹಿಂತಿರುಗಿ ಬರುವಾಗ ಚಿರತೆ ದಾಳಿ ನಡೆಸಿ ಮಂಜುನಾಥನನ್ನು ಕೊಂದು ಹಾಕಿದೆ ಎನ್ನಲಾಗಿದೆ. 
ಮೃತ ಮಂಜುನಾಥ್ ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದನು. ಚಿರತೆ ಸೆರೆಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಹಲವು ಬಾರಿ ದೂರು ನೀಡಿದ್ದರೂ ಅಧಿಕಾರಿಗಳು ಚಿರತೆ ಸೆರೆಗೆ ಮುಂದಾಗಲಿಲ್ಲ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಯುವಕ ಬಲಿಯಾಗಿದ್ದಾನೆ ಎಂದು ಗ್ರಾಮಸ್ಥರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು