ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ : ಗೋಪಿ

ಜೆ.ಗೋಪಿ, 

ಸದಸ್ಯರು, ಮೈಸೂರು ಮಹಾನಗರಪಾಲಿಕೆ

ಮೈಸೂರು : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ಈಗಾಗಲೇ ನಾಲ್ಕು ರಾಜ್ಯಗಳಲ್ಲಿ ಅಭೂತಪೂರ್ವ ಯಶಸ್ಸು ಪಡೆದು ಈಗ ಮಹಾರಾಷ್ಟ್ರ ರಾಜ್ಯದಲ್ಲಿಯೂ ಯಶಸ್ವಿಯಾಗಿ ಮುನ್ನಡೆಯುತ್ತಿರುವುದನ್ನು ನೋಡಿದರೆ ಮುಂದಿನ ಚುನಾವಣೆಗಳಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ಖಚಿತ ಎಂದು ಮೈಸೂರು ಮಹಾನಗರಪಾಲಿಕೆ ಸದಸ್ಯ ಗೋಪಿ ವಿಶ್ವಾಸ ವ್ಯಕ್ತಪಡಿಸಿದರು.

ದೀಪಾವಳಿ ಪ್ರಯುಕ್ತ ತಮ್ಮ ಕಚೇರಿಯಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಹೊರತು ಪಡಿಸಿ ಅನೇಕ ಬೇರೆ ಬೇರೆ ಪಕ್ಷಗಳ ಮುಖಂಡರು ರಾಹುಲ್ ಗಾಂಧಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ರೈತಪರ ಹೋರಾಟಗಾರ ಯೋಗೇಂದ್ರ ಯಾದವ್, ಶಿವಸೇನೆಯ ಉದ್ಭವ್ ಠಾಕ್ರೆ, ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ದೇಶದ ಘಟಾನುಘಟಿ ರಾಜಕಾರಣಿಗಳು ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತಿದ್ದಾರೆ. ಇತ್ತೀಚೆಗೆ ನಾಗಪುರದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ನೀಡಿರುವುದು ಅದರ ಅವನತಿಗೆ ಸಾಕ್ಷಿಯಾಗಿದೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಜಿಎಸ್‍ಟಿ ಯಿಂದ ಬಡವರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಜನತೆ ತತ್ತರಿಸಿದ್ದಾರೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ದೇಶದ ಜನರು ರಾಜಕೀಯ ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಪಕ್ಷ ಖಂಡಿತಾ ಅಧಿಕಾರಕ್ಕೆ ಬಂದು ಎಲ್ಲಾ ಸಮಸ್ಯೆಗಳು ಪರಿಹಾರ ಕಲ್ಪಿಸಲಿದೆ ಎಂದರು.
ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂರಾರು ಕೊಡುಗೆಗಳು ಇನ್ನೂ ಜನಮಾನಸದಲ್ಲಿ ಉಳಿದಿವೆ. ಐದು ವರ್ಷ ಸಮರ್ಥ ಆಡಳಿತವನ್ನು ನೀಡಿದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದರು. ಇದೇ ಸಂದರ್ಭದಲ್ಲಿ ಅವರು ಸಮಸ್ತ ಮೈಸೂರು ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು