ಅನ್ಯಜಾತಿ ಯುವಕನೊಂದಿಗೆ ಮಗಳು ಪರಾರಿ : ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ವರದಿ-ತಮೀಮ್ ಪಾಷ, ಶೀಡ್ಲಘಟ್ಟ
ಶಿಡ್ಲಘಟ್ಟ : ಅನ್ಯಜಾತಿ ಯುವಕನೊಂದಿಗೆ ಮಗಳು ಹೊರಟುಹೋದ ಹಿನ್ನೆಲೆಯಲ್ಲಿ ಮನನೊಂದು ಒಂದೇ ಕುಟುಂಬದ ಮೂವರು ವಿಷಪೂರಿತ ಗುಳಿಗೆಗಳನ್ನು ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. 
ಶ್ರೀರಾಮಪ್ಪ,(೬೯) ಸರೋಜ,(೫೫) ಹಾಗೂ ಮನೋಜ್(೨೫) ಆತ್ಮಹತ್ಯೆಗೆ ಶರಣಾಗಿರುವ ನತದೃಷ್ಟರು.
ಹಂಡಿಗನಾಳ ಗ್ರಾಮದ ಚಾಲಕ ನಾರಾಯಣಸ್ವಾಮಿ ಜೊತೆಯಲ್ಲಿ ಮಗಳು ಅರ್ಚನಾ ಹೊರಟು ಹೋಗಿದ್ದಾಳೆ. ಇದರಿಂದ ಮನನೊಂದು ತಮ್ಮ ಸಾವಿಗೆ ಮಗಳು ಕಾರಣವೆಂದು ಡೆತ್‌ನೋಟ್ ಬರೆದು ತಂದೆ ಶ್ರೀರಾಮಪ್ಪ ತಾಯಿ ಸರೋಜಾ ಹಾಗೂ ಸಹೋದರ ಮನೋಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಸಿಪಿಐ ನಂದನ್‌ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ಕಳುಹಿಸಿದ್ದಾರೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು