ಶ್ರೀಕಂಠೇಶ್ವರ ದೇವಾಲಯಕ್ಕೆ ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ
ಅಕ್ಟೋಬರ್ 27, 2022
ನಂಜನಗೂಡು : ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ಶ್ರೀಕಂಠೇಶ್ವರ ದೇವಾಲಯಕ್ಕೆ ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಗುರುವಾರ ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ನಂಜನಗೂಡು ತಹಸಿಲ್ದಾರ್ ಪರಶಿವಮೂರ್ತಿ ದೇವಸ್ಥಾನದ ಆಡಳಿತ ಅಧಿಕಾರಿ ಜಗದೀಶ್ ಕುಮಾರ್, ವೆಂಕಟೇಶ ಪ್ರಸಾದ್, ದೇವಸ್ಥಾನದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್, ಪಿಎಸ್‍ಐ ವಿಜಯರಾಜ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
0 ಕಾಮೆಂಟ್‌ಗಳು