ಹನೂರು : ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ತಾಲ್ಲೂಕಿನ ಮಹದೇಶ್ವರ ಬೆಟ್ಟ ಮುಖ್ಯರಸ್ತೆಯ ಕೆಂಚಯ್ಯನದೊಡ್ಡಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ನಾಲ್ಕು ಜನರು ಗಾಯಗೊಂಡಿದ್ದು, ಇವರೆಲ್ಲರೂ ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದವರು ಎನ್ನಲಾಗಿದೆ.
ಯಳಂದೂರು ಗ್ರಾಮದ ಯೋಗೇಶ್, ಮಹದೇವ್ ಹಾಗೂ ಬೆಂಗಳೂರಿನ ರಂಜನ್ ಮತ್ತು ಹರ್ಷಿತ್ ಎಂಬುವವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಹನೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ.
0 ಕಾಮೆಂಟ್‌ಗಳು