ಹನೂರು : ಮಹಾತ್ಮಾ ಗಾಂಧೀಜಿ ಅವರು ಕಂಡ ಸ್ವಚ್ಛ ಭಾರತ, ಸ್ವಸ್ಥ ಭಾರತದ ಕನಸನ್ನು ನಾವೆಲ್ಲರೂ ನನಸಾಗಿಸೋಣ ಗಾಂಧಿ ಜಯಂತಿಯ ಪ್ರಯುಕ್ತ ಪೌರಕಾರ್ಮಿಕ ಸೇವೆ ಮಾಡುವುದು ಪುಣ್ಯದ ಕೆಲಸವಾಗಿದೆ ಎಂದು ಸಮಾಜ ಸೇವಕ ನಿಶಾಂತ್ ತಿಳಿಸಿದರು.
ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟದ ಮಹದೇಶ್ವರಸ್ವಾಮಿ ಕಲ್ಯಾಣ ಮಂಟಪ ಸಮೀಪದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಪ್ರಯುಕ್ತ ಪೌರ ಕಾರ್ಮಿಕರನ್ನು ಸನ್ಮಾನಿಸಿ ಅವರು ಮಾತನಾಡಿದರು.
ನಿಮ್ಮ ನಿಶಾಂತ್ ಬಳಗದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಪೌರಕಾರ್ಮಿಕರಿಗೆ ಪಾದಪೂಜೆ ಸಲ್ಲಿಸಲಾಗಿದ್ದು, ಸುರಕ್ಷತಾ ಕಿಟ್ ವಿತರಣೆ ಮಾಡಿ ಗೌರವ ಸಲ್ಲಿಸಲಾಗಿದೆ. ದೇಶದೆಲ್ಲೆಡೆ ಸ್ವಚ್ಛತೆ ಕಾಯಕದಲ್ಲಿ ತೊಡಗಿಸಿಕೊಂಡು ಶ್ರಮಿಸುತ್ತಿರುವ ಪೌರಕಾರ್ಮಿಕರ ಕಾರ್ಯ ನಿಜಕ್ಕೂ ಮೆಚ್ಚುವಂತಾಗಿದೆ. ಪೌರಕಾರ್ಮಿರು ನಗರ, ಪಟ್ಟಣ, ಹಳ್ಳಿಯ ನೈರ್ಮಲ್ಯ ಕಾಪಾಡಿ ಸುಂದರವಾಗಿಸುವುದರ ಜೊತೆಗೆ ನಮ್ಮಲ್ಲರ ಆರೋಗ್ಯಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂಧರ್ಭದ್ದಲ್ಲಿ ಮಹದೇಶ್ವರಬೆಟ್ಟ ಡಾ.ಬಿ.ಆರ್.ಅಂಬೇಡ್ಕರ್ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಗೋಪಾಲ್, ಉಪಾಧ್ಯಕ್ಷ ಮಾರಮುತ್ತು, ಕಾರ್ಯದರ್ಶಿ ಮಾದೇಶ್, ಶರವಣ, ರಾಘವೇಂದ್ರ ಸೇರಿದಂತೆ ಅಭಿಮಾನಿಗಳು ಇದ್ದರು.
0 ಕಾಮೆಂಟ್‌ಗಳು