ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ದಸರಾ ಮೆರವಣಿಗೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯದ ಸಮೃದ್ಧಿಗೆ ಪ್ರಾರ್ಥನೆ
ಮೈಸೂರು : ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೂ ಮುನ್ನ ಸಂಪ್ರದಾಯದಂತೆ ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ ಬುಧವಾರ ಮದ್ಯಾಹ್ನ ೨.೩೬ರಿಂದ ೨.೫೦ ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು.
ಈ ವೇಳೆ ಅವರು ಮಾತನಾಡಿ, ರಾಜ್ಯದ ಮಹಾ ಜನತೆ ದಸರಾ ಹಬ್ಬದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಕಾರ್ಯಕ್ರಮ ರೂಪಿಸಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಜಂಬೂಸವಾರಿ ವೀಕ್ಷಣೆಗೆ ಆಗಮಿಸಿದ್ದಾರೆ. ಕಳೆದ ೯ ದಿನಗಳಿಂದ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದೆ. ಶಾಸಕರು, ಸಂಸದರು ಉತ್ತಮ ಸಹಕಾರ ನೀಡಿದ್ದಾರೆ. ಸರ್ವರಿಗೂ ಸನ್ಮಂಗಳವುಂಟಾಗಲಿ ಮತ್ತು ರಾಜ್ಯದ ಸುಭೀಕ್ಷೆಗಾಗಿ ನಾನು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಸಲ್ಲಸಿದ್ದೇನೆ ಎಂದರು.
ಸಚಿವರಾದ ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಮೇಯರ್ ಶಿವಕುಮಾರ್ ಇನ್ನಿತರರು ಇದ್ದರು.
0 ಕಾಮೆಂಟ್‌ಗಳು