ಮೊಬೈಲ್ ಕಳವು ಆರೋಪಿ ವಿಚಾರಣೆ ವೇಳೆ ಬೈಕ್ ಕಳವು ಪ್ರಕರಣ ಬೆಳಕಿಗೆ

 ವರದಿ-ಶಾರುಕ್ ಖಾನ್, ಹನೂರು 

ಹನೂರು : ಮೊಬೈಲ್ ಕಳವು ಅನುಮಾನದ ಮೇಲೆ ವ್ಯಕ್ತಿಯೊಬ್ಬನನ್ನು  ಬಂಧಿಸಿದ ರಾಮಾಪುರ ಪೊಲೀಸರು ವಿಚಾರಣೆ ನಡೆಸುತ್ತಿದ್ದ ವೇಳೆ ಆತ ಬೈಕ್ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ತಾಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೌದಳ್ಳಿ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಮೊಬೈಲ್ ಕಳ್ಳತನವಾಗಿದೆ ಎಂಬ ದೂರು ಆಧರಿಸಿ ಸಿಸಿಟಿವಿ ದೃಶ್ಯ ಆಧರಿಸಿ ತಮಿಳುನಾಡು ಮೂಲದ ಮಹೇಂದರ್ ಎಂಬ  ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಆತ ಬೈಕ್ ಕಳ್ಳತನ ಮಾಡಿರುವ ಪ್ರಕರಣವೂ ಬಗ್ಗೆ ಬೆಳಕಿಗೆ ಬಂದಿದೆ. ಅಲ್ಲದೇ ಈತನ ವಿರುದ್ಧ ತಮಿಳುನಾಡು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ ಎನ್ನಲಾಗಿದೆ. ರಾಮಾಪುರ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು