ನವೆಂಬರ್ 11 ರಂದು ಕಲಾಮಂದಿರದಲ್ಲಿ ಅದ್ಧೂರಿಯಾಗಿ ಕನಕ ಜಯಂತಿ ಆಚರಣೆ : ಸಮಿತಿ ಸಂಚಾಲಕ ಎಂ.ಶಿವಣ್ಣ

ಮೈಸೂರು : ಸಂತ ಶ್ರೀ ಕನಕದಾಸರ ಜಯಂತ್ಯೋತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಇದೇ ನ.11 ರಂದು ಕಲಾಮಂದಿರದಲ್ಲಿ ಕನಕ ಜಯಂತಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದು ಸಮಿತಿ ಸಂಚಾಲಕರಾದ ಎಂ. ಶಿವಣ್ಣ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ ಒಂಭತ್ತಕ್ಕೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಕನಕ ಮೂರ್ತಿ ಇರುವ ಅಲಂಕೃತ ಪ್ರತಿಮೆ ಮೆರವಣಿಗೆ ಹೊರಡಲಿದೆ. ಇದರಲ್ಲಿ ಸುಮಾರು 30 ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಬಳಿಕ ಕಲಾಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಅಲ್ಲದೆ, ನ. 12 ಹಾಗೂ 14 ರಂದು ಸಿದ್ಧಾರ್ಥನಗರದ ಕನಕ ಭವನದಲ್ಲಿ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ನೆರವೇರಲಿವೆ ಎಂದು ಮಾಹಿತಿ ನೀಡಿದರು.
ಬ್ಯಾಂಕ್ ಪುಟ್ಟಸ್ವಾಮಿ, ಸಿದ್ಧ ನಾಗೇಂದ್ರ, ವಿಶ್ವನಾಥ್ ಹಾಜರಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು