1.40 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಎಸ್.ಪುಟ್ಟರಾಜು ಭೂಮಿಪೂಜೆ
ನವೆಂಬರ್ 14, 2022
ದೇವಾಲಯ ಅಭಿವೃದ್ಧಿಗೆ ಒಂದು ಕೋಟಿ ಅನುದಾನ ಕೊಡಿಸುವ ಭರವಸೆ
ಮೈಸೂರು : ತಾಲ್ಲೂಕಿನ ಮಂಡಿಬೆಟ್ಟಹಳ್ಳಿ ಮತ್ತು ಶಂಭೂನಹಳ್ಳಿ ಗ್ರಾಮದಲ್ಲಿ 1.40 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಎಸ್.ಪುಟ್ಟರಾಜು ಸೋಮವಾರ ಭೂಮಿಪೂಜೆ ಸಲ್ಲಿಸಿದರು. 55 ಲಕ್ಷ ರೂ. ವೆಚ್ಚದಲ್ಲಿ ಮಂಡಿ ಬೆಟ್ಟಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ಪರಿಶಿಷ್ಟ ಕಾಲೂನಿಗೆ ಹೋಗುವ ರಸ್ತೆ ಅಭಿವೃದ್ಧಿ, ಇದೇ ರೀತಿ 85 ಲಕ್ಷ ರೂ. ವೆಚ್ಚದಲ್ಲಿ ಶಂಭೂನಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ಹಾಲಿನ ಡೈರಿ ಮೂಲಕ ಗ್ರಾಮದ ಒಳಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. ರಸ್ತೆಯ ಪಕ್ಷದಲ್ಲಿ ಬಾಕ್ಸ್ ಚರಂಡಿ ನಿರ್ಮಿಸಲಾಗುವುದು. ಕೆಆರ್‍ಐಡಿಎಲ್ ಈ ಕಾಮಗಾರಿಯ ಜವಾಬ್ದಾರಿ ವಹಿಸಿದೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮಂಜುನಾಥ್ ಶಾಸಕ ಪುಟ್ಟರಾಜು ಅವರಿಗೆ ಮಂಡಿಬೆಟ್ಟಹಳ್ಳಿ ಗ್ರಾಮದ ಎರಡು ದೇವಾಲಯಗಳು ಶಿಥಿಲವಾಗಿದ್ದು, ಅವುಗಳ ಪುನಶ್ಚೇತನಕ್ಕೆ ಸಹಕರಿಸಬೇಕೆಂದು ಮನವಿ ಸಲ್ಲಿಸಿದರು. ಈ ವೇಳೆ ಶಾಸಕ ಪುಟ್ಟರಾಜು ಮಾತನಾಡಿ, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಮಾತನಾಡಿ ವಿಶೇಷ ಅನುದಾನ ಕೊಡಿಸುವುದಾಗಿ ಭರವಸೆ ನೀಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗುರುಸ್ವಾಮಿ, ಚಲುವರಾಜು, ತಾಪಂ ಮಾಜಿ ಸದಸ್ಯ ನಿಂಗೇಗೌಡ ಮಂಡಿಬೆಟ್ಟಹಳ್ಳಿ ಮಂಜುನಾಥ್, ದ್ಯಾವಪ್ಪ, ಶಿವಕುಮಾರ್, ಮನು ಇನ್ನಿತರರು ಇದ್ದರು.
0 ಕಾಮೆಂಟ್‌ಗಳು