ಮೈಸೂರಿನಲ್ಲಿ 18 ರಂದು ಮಹಿಳಾ ಉದ್ಯೋಗ ಮೇಳ : ಉತ್ಪನ್ನಗಳ ಪ್ರದರ್ಶನ, ಮಾರಾಟ
ನವೆಂಬರ್ 05, 2022
ಮೈಸೂರು : ನಗರದ ಎಡುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಷನ್ ವತಿಯಿಂದ ನವೆಂಬರ್-18 ರಂದು ಮಹಿಳಾ ಉದ್ಯೋಗ ಮೇಳ ಮತ್ತು ಮಹಿಳೆಯರು ತಯಾರು ಮಾಡಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ರಚನಾ ಮಹೇಶ್ ತಿಳಿಸಿದ್ದಾರೆ. ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮೈಸೂರು ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. 18 ರಿಂದ 50 ವರ್ಷದೊಳಗಿನ ಯಾವುದೇ ವಿದ್ಯಾರ್ಹತೆ ಹೊಂದಿರುವ ಮಹಿಳೆಯರು ಭಾಗವಹಿಸಬಹುದು ಎಂದು ವಿವರಿಸಿದರು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 6364340027, 7204809085, 8660239699ಗೆ ಸಂರ್ಕಿಸಬಹುದು. ಗೋಷ್ಠಿಯಲ್ಲಿ ಮಹಾರಾಣಿ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಸೋಮಣ್ಣ, ಡಾ.ನಿರಂಜನಬಾಬು, ಪ್ರತಿಭಾ ಗುರುರಾಜ್, ಹೇಮಾವತಿ ಇನ್ನಿತರರು ಇದ್ದರು.
0 ಕಾಮೆಂಟ್‌ಗಳು