ಟೈರ್ ಸ್ಪೋಟಗೊಂಡು ಹೊತ್ತಿ ಉರಿದ ಬಸ್ : 30 ಪ್ರಯಾಣಿಕರು ಪಾರು

ಹುಬ್ಬಳ್ಳಿ : ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಟೈರ್ ಸ್ಪೋಟಗೊಂಡು ಹೊತ್ತಿ ಉರಿದ ಘಟನೆ ಭಾನುವಾರ ಹುಬ್ಬಳ್ಳಿ-ಧಾರವಾಡ ಬೈಪಾಸ್ ಬಳಿಯ ಕಾರವಾರ ರಸ್ತೆಯಲ್ಲಿ ನಡೆದಿದೆ.
ಪೂನಾದಿಂದ ಉಡುಪಿಗೆ ಬರುತ್ತಿದ್ದ ರೇμÁ್ಮ ಟ್ರಾವೆಲ್ಸ್ ಕಂಪನಿಯ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ಸಮಯದಲ್ಲಿ ಬೆಂಕಿ ಸಂಪೂರ್ಣ ಬಸ್’ಗೆ ಆವರಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟೈರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ಬಸ್ ಚಾಲಕ ತಿಳಿಸಿದ್ದಾರೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ತಾಸು ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು