ಮೈಸೂರಿನಲ್ಲಿ 60 ಕೋಟಿ ವೆಚ್ಚದ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ
ನವೆಂಬರ್ 04, 2022
ಮ್ಯೆಸೂರು : ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಆರ್‍ಎಸ್ ರಸ್ತೆಯಲ್ಲಿರುವ ಪಿ.ಕೆ.ಟಿಬಿ ಆಸ್ಪತ್ರೆ ಆವರಣದಲ್ಲಿ 60 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಶಾಸಕ ಎಲ್.ನಾಗೇಂದ್ರ ತಿಳಿಸಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಹಣ ಖರ್ಚಾಗುತ್ತಿದ್ದ ಕಾರಣ ನಗರ ಮತ್ತು ಗ್ರಾಮೀಣ ಪ್ರದೇಶದ ಬಡ ರೋಗಿಗಳಿಗೆ ಚಿಕಿತ್ಸಾ ವೆಚ್ಚ ಭರಿಸುವುದು ಕಷ್ಟವಾಗಿತ್ತು. ಈ ಕಾರಣದಿಂದ ಇಲ್ಲಿ ಸರ್ಕಾರಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವಂತೆ ಶಾಸಕ ಎಲ್.ನಾಗೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆ ಮಂಜೂರು ಮಾಡಲು ಸಹಕರಿಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಆರೋಗ್ಯ ಸಚಿವ ಡಿ.ಸುಧಾಕರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ ರಿಗೆ ಶಾಸಕ ನಾಗೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.
0 ಕಾಮೆಂಟ್‌ಗಳು