ನಾಳೆಯಿಂದ ಕೆ.ಎನ್.ಪುರ ಬಡಾವಣೆಯಲ್ಲಿ ಶ್ರೀ ಮಲೆ ಮಹದೇಶ್ವರ, ಶ್ರೀ ಆದಿಶಕ್ತಿ ಚಾಮುಂಡೇಶ್ವರಿಯ 7ನೇ ವರ್ಷದ ವಾರ್ಷಿಕೋತ್ಸವ
ನವೆಂಬರ್ 05, 2022
ಮೈಸೂರು : ನಗರದ ಕೆ.ಎನ್.ಪುರ (ಕ್ಯಾತಮಾರನಹಳ್ಳಿ) ಬಡಾವಣೆಯಲ್ಲಿ ಶ್ರೀ ಮಲೆ ಮಹದೇಶ್ವರ ಮತ್ತು ಶ್ರೀ ಆದಿಶಕ್ತಿ ಚಾಮುಂಡೇಶ್ವರಿಯ 7ನೇ ವರ್ಷದ ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ನಡೆಸಲಾಗಿದೆ ಎಂದು ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಾಂಕ್ರಿಟ್ ರಾಜಣ್ಣ ತಿಳಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.6 ರಂದು ಬೆಳಿಗ್ಗೆ 8 ಗಂಟೆಗೆ ಸ್ವಾಮಿಗೆ ಪಂಚಾಮೃತ ಅಭಿಷೇಕ, ಪುಣ್ಯಾಹ ನಾಂದಿ, ಕಲಶಾರಾಧನೆ, ಮಹಾ ಮೃತ್ಯಂಜಯ್ಯ ಯಾಗ, ನವಗ್ರಹ, ಗಣಪತಿ ಹೋಮ, ಕುಂಭಾಭಿಷೇಕ, ಮಹಾಮಂಗಳಾರತಿ ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದರು. ನ.7 ರಂದು ಸೋಮವಾರ ಮದ್ಯಾಹ್ನ 3.30ಕ್ಕೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಹುಲಿ ವಾಹನ ಉತ್ಸವ ದೇವಾಲಯದಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತದೆ ಎಂದು ವಿವರಣೆ ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಗಿರಿಜಾ ನಟರಾಜ್ ಆಗಮಿಸಲಿದ್ದಾರೆ. ಅಲ್ಲದೇ ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್ ಮುಂತಾದವರು ಆಗಮಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಅಂಬರೀಶ್, ಪ್ರಧಾನ ಕಾರ್ಯದರ್ಶಿ ಸತೀಶ್, ಖಜಾಂಚಿ ಪದ್ಮನಾಭ, ನಿರ್ದೇಶಕರಾದ ಎಂ.ಜೆ.ಮಹದೇವ, ರಾಘವೇಂದ್ರ ಮೂರ್ತಿ, ಶಂಕರಣ್ಣ, ಕಾಂಕ್ರಿಟ್ ಶ್ರೀಧರ್ ಇದ್ದರು.
0 ಕಾಮೆಂಟ್‌ಗಳು