ಕಳ್ಳಭಟ್ಟಿ ಸಾರಾಯಿ ಅಡ್ಡೆ ಮೇಲೆ ಅಬಕಾರಿ ಪೊಲೀಸರ ದಾಳಿ : ಕಳ್ಳಭಟ್ಟಿ ತಯಾರಿಕೆ ಕಚ್ಛಾವಸ್ತು ವಶ
ನವೆಂಬರ್ 01, 2022
ವರದಿ-ಶಾರುಕ್ ಖಾನ್, ಹನೂರು ಹನೂರು : ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 0.5 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ 10 ಲೀಟರ್ ಬೆಲ್ಲದ ಕೊಳೆ ಮತ್ತು 8. 640 ಲೀಟರ್ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಳ್ಳಿ ಗ್ರಾಮದ ರವಿ ನಾಯ್ಕ್ ಎಂಬವವರ ಮನೆ ಮೇಲೆ ದಾಳಿ ಮಾಡಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಕಳ್ಳಬಟ್ಟಿಯನ್ನು ವಶಕ್ಕೆ ಪಡೆಯಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ. ಕೊಳ್ಳೇಗಾಲ ವಲಯ ಅಬಕಾರಿ ನಿರೀಕ್ಷಕ ಸುನೀಲ್ ನೇತತ್ವದಲ್ಲಿ ಉಪನಿರೀಕ್ಷಕ ಸಿದ್ದಯ್ಯ ಹಾಗೂ ಸಿಬ್ಬಂದಿಗಳಾದ ಪ್ರದೀಪ್, ರಮೇಶ್ ಹಾಗೂ ವಾಹನ ಚಾಲಕ ಮಂಜು ಪ್ರಸಾದ್ ದಾಳಿ ನಡೆಸಿ ಮಾಲನ್ನು ವಶಕ್ಕೆ ಪಡೆದಿದ್ದಾರೆ.
0 ಕಾಮೆಂಟ್‌ಗಳು