ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನಿಂದ ಹೆಚ್.ಹೊಸಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಭೂಮಿಪೂಜೆ
ನವೆಂಬರ್ 02, 2022
ಗ್ರಾಮಸ್ಥರು ಒಗ್ಗಟ್ಟಾಗಿದ್ದರೆ ಮಾತ್ರ ಗ್ರಾಮಗಳ ಅಭಿವೃದ್ಧಿ : ಕದಲೂರು ಉದಯ್
ವರದಿ-ಟಿ.ಬಿ.ಸಂತೋಷ, ಮದ್ದೂರು
ಮದ್ದೂರು : ಗ್ರಾಮಸ್ಥರು ಒಗ್ಗಟ್ಟಾದರೆ ಮಾತ್ರ ನಿಮ್ಮ ಗ್ರಾಮಗಳ ಅಭಿವೃದ್ಧಿ ಸಾಧ್ಯ ಜನ ಒಂದಾಗದಿದ್ದರೇ ಯಾವುದೇ ಗ್ರಾಮಗಳ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಸಮಾಜ ಸೇವಕ ಕದಲೂರು ಉದಯ್ ಹೇಳಿದರು. ತಾಲೂಕಿನ ಹೆಚ್. ಹೊಸಹಳ್ಳಿ ಗ್ರಾಮದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಭೂಮಿಪೂಜೆ ಸಲ್ಲಿಸಿ ಅವರು ಮಾತನಾ ಡಿದರು.
ಗ್ರಾಮಸ್ಥರು ತಮ್ಮ ಗ್ರಾಮಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಳ್ಳಬೇಕು. ಜತೆಗೆ ಅವುಗಳ ಸಮರ್ಪಕ ಬಳಕೆ ಮಾಡಿಕೊಳ್ಳಬೇಕು ಇದಕ್ಕಾಗಿ ನಮ್ಮ ಚಾರಿಟಬಲ್ ಟ್ರಸ್ಟ್ ಸದಾ ನಿಮ್ಮೊಂದಿಗಿದೆ ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಉದಯ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಮುಖಂಡರಾದ ಕದಲೂರು ರವಿ, ತಿಮ್ಮೇಗೌಡ, ಎಲ್‍ಐಸಿ ಮಲ್ಲೇಶ್, ಮಲ್ಲೇಶ್, ಮರಿಸಿದ್ದಯ್ಯ, ಎಳನೀರು ಮಲ್ಲೇಶ್, ಜೋಗಿ ಶಿವಕುಮಾರ್, ದೊಡ್ಡಯ್ಯ ಮುಂತಾದವರು ಇದ್ದರು.
0 ಕಾಮೆಂಟ್‌ಗಳು