ಹನೂರು : ಸಂವಿಧಾನ ದಿನಾಚರಣೆ ಪ್ರಯುಕ್ತ ಪಟ್ಟಣ ಪಂಚಾಯಿತಿಯಲ್ಲಿ ಅಂಬೇಡ್ಕರ್ ಮತ್ತು ಸಂವಿಧಾನದ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಪಟ್ಟಣ ಪಂಚಾಯಿತಿಯ ಅಧ್ಯಕೆ ಚಂದ್ರಮ್ಮ ನೇತೃತ್ವದಲ್ಲಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ನಮನ ಸಲ್ಲಿಸಲಾಯಿತು. ಪಪಂ ಉಪಾಧ್ಯಕ್ಷ ಗಿರೀಶ್ ಹಾಗೂ ಸದಸ್ಯರುಗಳು, ದಲಿತ ಸಮುದಾಯದ ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
0 ಕಾಮೆಂಟ್‌ಗಳು