ದಂಟಳ್ಳಿ ದೊಡ್ಡ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

 ವರದಿ-ಶಾರುಕ್ ಖಾನ್, ಹನೂರು

ಹನೂರು : ತಾಲ್ಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದಂಟಳ್ಳಿ ಗ್ರಾಮದ ಹೃದಯ ಭಾಗದಲ್ಲಿರುವ  ದೊಡ್ಡ ಕೆರೆಯಲ್ಲಿ ಕಳೆದ ಹದಿನೈದು ದಿನಗಳಿಂದಲೂ ಮೊಸಳೆ ಪ್ರತ್ಯಕ್ಷವಾಗಿ ಈ ಭಾಗದ ಜನರಲ್ಲಿ ಆತಂಕ ಮೂಡಿಸಿದೆ. 
ಈ ಹಿಂದೆ ನೀರು ಕುಡಿಯಲು ಕೆರೆಯ ಬಳಿ ಬಂದಿದ್ದ ನಾಯಿಯೊಂದನ್ನು ಮೊಸಳೆ ಹಿಡಿದಿತ್ತು ಎನ್ನಲಾಗಿದೆ. 
ಈ ಬಗ್ಗೆ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರೂ ಮೊಸಳೆ ಹಿಡಿಯಲು ಯಾವುದೇ ಕ್ರಮ ಕೈಗೊಳ್ಳದ ಕಾರಣ ಗ್ರಾಮಸ್ಥರು ತೀವ್ರ ಆತಂಕದಲ್ಲಿ ದಿನ ದೂಡುತ್ತಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮವಹಿಸಿ ಮೊಸಳೆ ಹಿಡಿಯಲು ಅರಣ್ಯ ಇಲಾಖೆಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು