ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಪಲ್ಟಿ : ಚಾಲಕನ ಕಾಲು ಮುರಿತ

 ವರದಿ-ಶಾರುಕ್ ಖಾನ್, ಹನೂರು

ಹನೂರು : ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ತಾಳಬೆಟ್ಟದ 6ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಚಾಲಕನ ಬಲಗಡೆ ಕಾಲು ಮುರಿದು ಹೋಗಿರುವ ಬಗ್ಗೆ ವರದಿಯಾಗಿದ್ದು, ಚಾಲಕನನ್ನು ತಕ್ಷಣ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಪೆಟ್ಟಾಗಿದ್ದು ಗಾಯಾಳುಗಳನ್ನು  ಕೊಳ್ಳೆಗಾಲ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು