ಕುಟುಂಬ ಸಮೇತರಾಗಿ ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಐಜಿಪಿ ಪ್ರವೀಣ್ ಮಧುಕರ್ ಪವಾರ್

-ಶಾರುಕ್ ಖಾನ್, ಹನೂರು

ಹನೂರು : ದಕ್ಷಿಣ ವಲಯ ಐಜಿಪಿಯಾದ ಪ್ರವೀಣ್ ಮಧುಕರ್ ಪವಾರ್ ಮಂಗಳವಾರ ಕುಟುಂಬ ಸಮೇತರಾಗಿ ಮಹದೇಶ್ವರ ಬೆಟ್ಟಕ್ಕೆ ಭೇಟಿ ಮಾದಪ್ಪನಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. 
ಇದೇ ವೇಳೆ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದ ಅಧಿಕಾರಿಗಳು  ಹೂಗುಚ್ಛ ನೀಡಿ ಐಜಿಪಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ತಮ್ಮ ಕುಟುಂಬಸ್ಥರ ಜೊತೆ ಆಗಮಿಸಿದ್ದ ದಕ್ಷಿಣ ವಲಯದ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ಶ್ರೀ ಕ್ಷೇತ್ರದಲ್ಲಿ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. 
ಚಾಮರಾಜನಗರ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿμÁ್ಠಧಿಕಾರಿ ಸುಂದರ್ ರಾಜ್, ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಉಪಸ್ಥಿತರಿದ್ದರು.