ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ : ಸಂತಸ ವ್ಯಕ್ತಪಡಿಸಿದ ಶಾಸಕ ಆರ್.ನರೇಂದ್ರ
ನವೆಂಬರ್ 01, 2022
ವರದಿ-ಶಾರುಕ್ ಖಾನ್, ಹನೂರು
ಹನೂರು : ಹೆಸರಾಂತ ಚಿತ್ರನಟ, ಮಾನವತಾವಾದಿ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಆರ್ ನರೇಂದ್ರ ಅಭಿಮಾನ ವ್ಯಕ್ತಪಡಿಸಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುನೀತ್ ರಾಜಕುಮಾರ್ ಅವರ ಸೇವಾಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು. ತಹಸೀಲ್ದಾರ್ ಆನಂದಯ್ಯ ರವರು ಮಾತನಾಡಿ, ರಾಜ್ಯ ಸರ್ಕಾರ ನಟ ಪುನೀತ್ ರಾಜಕುಮಾರ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ನಮ್ಮ ತಾಲೂಕಿನ ಜೀರಿಗೆಗದ್ದೆ ಪೋಡಿನ ನಾಟಿ ವೈದ್ಯೆ ಸೋಲಿಗರ ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿರುವ ಈ ಸಂದರ್ಭದಲ್ಲಿ ನಮ್ಮ ತಾಲ್ಲೂಕಿನಲ್ಲಿ 67ನೇ ರಾಜ್ಯೋತ್ಸವವನ್ನು ಆಚರಿಸುತ್ತಿರುವುದು ತುಂಬಾ ಸಂತಸದ ವಿಚಾರ ಎಂದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಗೋಪಿನಾಥಂ ಸರ್ಕಾರಿ ಪ್ರೌಡಶಾಲೆ ಶಿಕ್ಷಕ ಡಾ.ಮಹೇಂದ್ರ ಪಟೇಲ್ ಮಾತನಾಡಿ, ಕನ್ನಡ ಭಾμÁ ಬಳಕೆ ಮತ್ತು ಭಾμÉಯಲ್ಲಿ ಪರಿಪಕ್ವತೆ, ಭಾμÁ ಅಭಿಮಾನ ಮತ್ತು ಅಸ್ತಿತ್ವ ನಾಡಿನ ನಾಗರಿಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಇದೇ ವೇಳೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಗರಿಷ್ಠ ಅಂಕ ಪಡೆದು ಸಾಧನೆ ಮಾಡಿದ ತಾಲೂಕಿನ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು. ಪಟ್ಟಣದ ವಿವಿಧ ಶಾಲೆಯ ಮಕ್ಕಳು ಕನ್ನಡ ಅಭಿಮಾನವನ್ನು ಸಾರುವ ಗೀತೆಗಳಿಗೆ ಮನಮೋಹಕ ನೃತ್ಯ ಮಾಡುವ ಮೂಲಕ ಎಲ್ಲರನ್ನೂ ರಂಜಿಸಿ ಅಭಿಮಾನ ಮೆರೆದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರಾದ ಸುದೇಶ್, ಹರೀಶ್, ಸಂಪತ್ ಕುಮಾರ್, ಮುಮ್ತಾಜ್ ಬೇಗಂ, ಸೋಮಶೇಖರ್, ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಪಶುಪಾಲನಾ ಇಲಾಖೆಯ ಸಿದ್ದರಾಜು, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ, ಕೃಷಿ ಅಧಿಕಾರಿ ರಘುವೀರ್ ಇನ್ನಿತರರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು