ಶ್ರೀ ಸಿದ್ದಗಂಗಾ ಹಳೆಯ ವಿಧ್ಯಾರ್ಥಿಗಳು ಹಾಗೂ ಹಿತೈಷಿಗಳ ಟ್ರಸ್ಟ್ ಮಂಡ್ಯ ಜಿಲ್ಲಾ ಅಧ್ಯಕ್ಷರಾಗಿ ಎಂ.ಎಸ್.ಮಂಜುನಾಥ್ ನೇಮಕ
ನವೆಂಬರ್ 08, 2022
ತುಮಕೂರು : ಶ್ರೀ ಸಿದ್ದಗಂಗಾ ಹಳೆಯ ವಿಧ್ಯಾರ್ಥಿಗಳು ಹಾಗೂ ಹಿತೈಷಿಗಳ ಟ್ರಸ್ಟ್ ಮಂಡ್ಯ ಜಿಲ್ಲಾ ಅಧ್ಯಕ್ಷರನ್ನಾಗಿ ಎಂ.ಎಸ್.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಕೆ.ಹೆಚ್.ಶಿವರುದ್ರಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಶ್ರೀ ಸಿದ್ದಗಂಗಾ ಮಠದ ಹಳೆಯ ವಿಧ್ಯಾರ್ಥಿಗಳನ್ನು ಮತ್ತು ಶ್ರೀಮಠದ ಹಿತೈಷಿಗಳನ್ನು ಸಂಘಟಿಸಿ ಟ್ರಸ್ಟ್‍ನ ಸದಸ್ಯರನ್ನಾಗಿ ಮಾ ಡುವುದು ಮತ್ತು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಂತೆ ಕಾರ್ಯದರ್ಶಿಗಳು ಹೇಳಿದ್ದಾರೆ. ನೂತನ ಮಂಡ್ಯಾ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಅವರಿಗೆ ಕಾಯಕ ಯೋಗಿ ಪ್ರತಿಷ್ಠಾನದ ಶಿವಕುಮಾರ್ ಅಭಿನಂದಿಸಿದ್ದಾರೆ. ಎಂ.ಎಸ್.ಮಂಜುಮಾಥ್ ಮೂಲತಃ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಮಂಡಿ ಬೆಟ್ಟಹಳ್ಳಿ ಗ್ರಾಮದವರು. ಅಖಿಲ ಭಾರತ ವೀರಶೈವ ಮಹಾಸಭಾ ಮಂಡ್ಯ ಜಿಲ್ಲೆಯ ಉಪಾಧ್ಯಕ್ಷರಾಗಿರುವ ಅವರು ಜಿಲ್ಲೆಯ ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕನ್ನಡ ನಾಡು, ನುಡಿ, ನೆಲ, ಜಲದ ಪರ ಹೋರಾಟ ಮಾಡುತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.