ರಾಜೀವ್ ಗಾಂಧಿ ಹತ್ಯೆ ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಸೂಚನೆ : ತಮಿಳುನಾಡಿನಲ್ಲಿ ಸಿಹಿ ಹಂಚಿ ಸಂಭ್ರಮ

ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರು ಅಪರಾಧಿಗಳನ್ನು ನವೆಂಬರ್ 12, 2022 ರಂದು ಬಿಡುಗಡೆ ಮಾಡಲಾಗುವುದು ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶಗಳು ಮತ್ತು ಅಗತ್ಯ ಸರ್ಕಾರಿ ಸೂಚನೆಗಳು ದೊರೆತ ನಂತರ ಅಪರಾಧಿಗಳನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಇದಕ್ಕಾಗಿ ನಾವು ಕಾಯುತ್ತಿದ್ದೇವೆ ಎಂದು ಅವರು ಹೇಳಿರುವುದಾಗಿ ರಾಷ್ಟ್ರೀಯ ಸುದ್ಧಿ ಮಾಧ್ಯಮಗಳು ವರದಿ ಮಾಡಿವೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್, ಆರ್.ಪಿ. ರವಿಚಂದ್ರನ್ ಸೇರಿದಂತೆ ಆರು ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಗೆ ವಿನಂತಿಸಿತ್ತು. ಹೀಗಾಗಿ ಅವಧಿಗೂ ಮುನ್ನ ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ತಮಿಳುನಾಡಿನಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಗಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು