ಪಾಂಡವಪುರ : ಕೆ.ಬೆಟ್ಟಹಳ್ಳಿ ಗ್ರಾಮದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರಿದ ನೂರಾರು ಯುವಕರು

ಪಾಂಡವಪುರ : ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕೆ.ಬೆಟ್ಟಹಳ್ಳಿ ಗ್ರಾಮದಲ್ಲಿ ನೂರಾರು ಯುವಕರು ಶನಿವಾರ ವಿವಿಧ ಪಕ್ಷಗಳನ್ನು ತೊರೆದು ಡಾ.ಎನ್.ಎಸ್.ಇಂದ್ರೇಶ್ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಯುವ ಮುಖಂಡರು ಮಾತನಾಡಿ, ಡಾ.ಎನ್.ಎಸ್.ಇಂದ್ರೇಶ್ ಅವರು ಈ ಕ್ಷೇತ್ರಕ್ಕೆ ಕಾಲಿಟ್ಟಮೇಲೆ ಹಲವಾರು ಜನಪರ ಸೇವೆಗಳು ನಿರಂತರವಾಗಿ ನಡೆಯುತ್ತಿವೆ. ಇಂದ್ರೇಶ್ ಅವರು ಪಕ್ಷ ಭೇದವಿಲ್ಲದೆ ಕಷ್ಟದಲ್ಲಿರುವ ಜನರಿಗೆ ನಿರಂತರವಾಗಿ ಸಹಾಯ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಅವರ ಸೇವಾ ಕಾರ್ಯವನ್ನು ಮೆಚ್ಚಿ ಅವರಿಗೆ ರಾಜಕೀಯ ಶಕ್ತಿ ಕೊಡಿಸಲು ಬಿಜೆಪಿ ಸೇರುತ್ತಿರುವುದಾಗಿ ಹೇಳಿದರು.

ಬಿಜೆಪಿ ಮುಖಂಡ ಡಾ.ಎನ್.ಎಸ್.ಇಂದ್ರೇಶ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಪರ ಆಡಳಿತಕ್ಕೆ ಜನರು ಮನ್ನಣೆ ನೀಡುತ್ತಿದ್ದಾರೆ. ಸರ್ಕಾರದ ಮುತುವರ್ಜಿಯಿಂದ ಮಂಡ್ಯ ಜಿಲ್ಲೆಯ ಜೀವನಾಡಿಗಳಾದ ಮೈಶುಗರ್ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳು ಆರಂಭವಾಗಿವೆ. ಇದರಿಂದ ಈ ಭಾಗದ ರೈತರಲ್ಲಿ ಆರ್ಥಿಕ ಚೈತನ್ಯ ಕಂಡುಬಂದಿದೆ. ಅಲ್ಲದೇ ಮಂಡ್ಯ ಯೂನಿವರ್ಸಿಟಿ ಕೊಡುಗೆಯೂ ಜಿಲ್ಲೆಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಂತಹ ರೈತಪರ ಯೋಜನೆಗಳು ಬಿಜೆಪಿ ಸರ್ಕಾರದ ಜನಮೆಚ್ಚುವ ಕೆಲಸವಾಗಿದ್ದು, ಇವುಗಳಿಂದ ಪ್ರೇರಣೆ ಹೊಂದಿ ಮೇಲುಕೋಟೆ ಕ್ಷೇತ್ರದಲ್ಲಿ ಜನರು ಸಮರೋಪಾದಿಯಲ್ಲಿ ಬಿಜೆಪಿ ಸೇರ್ಪಡೆಯಾಗುತ್ತಿರುವುದು ನಮಗೆ ಆನೆ ಬಲ ಬಂದಂತಾಗಿದೆ ಎಂದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು