ಮದ್ದೂರಿನ ಸರ್ವೋತೋಮುಖ ಅಭಿವೃದ್ಧಿಗೆ ಮತ್ತೊಮ್ಮೆ ಡಿ.ಸಿ ತಮ್ಮಣ್ಣನವರನ್ನು ಬೆಂಬಲಿಸಿ : ನಿಖಿಲ್ ಕುಮಾರಸ್ವಾಮಿ ಕರೆ

-ಟಿ.ಬಿ.ಸಂತೋಷ್, ಮದ್ದೂರು

ಮದ್ದೂರು : ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗಾಗಿ ಮತ್ತೊಮ್ಮೆ ಡಿ.ಸಿ.ತಮ್ಮಣ್ಣ ಅವರನ್ನು ಬೆಂಬಲಿಸಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ, ಚಿತ್ರನಟ ನಿಖಿಲ್ ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಕಪರೆಕೊಪ್ಪಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನ ಹಾಗೂ ವಿಗ್ರಹ ಪ್ರತಿμÁ್ಠಪನ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. 
ಡಿ.ಸಿ.ತಮ್ಮಣ್ಣ ತಮ್ಮ ಇಳಿ ವಯಸ್ಸಿನಲ್ಲೂ ತಾಲೂಕಿನ ಸವಾರ್ಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಯುವಕರು ಹಣ ಹೆಂಡ ಅಮಿಷಗಳಿಗೇ ಬಲಿಯಾಗದೆ ಮತ್ತೊಮ್ಮೆ ಇವರನ್ನು ಶಾಸಕರನ್ನಾಗಿ ಮಾಡಿ ತಾಲೋಕಿನ ಅಭಿವೃದ್ಧಿಗೆ ಸಹಕರಿಸಬೇಕು ಎಂದರು. 

ಕಪರೆಕೊಪ್ಪಲು ಗ್ರಾಮದ ಗ್ರಾಮಸ್ಥರು ನಿಖಿಲ್ ಕುಮಾರಸ್ವಾಮಿ ಅವರನ್ನು ತಮಟೆ, ನಗಾರಿ ವಾದ್ಯಗಳು, ಪೂಜಾ ಕುಣಿತದ ಜಾನಪದ ಕಲಾ ತಂಡಗಳ ಮೆರವಣಿಗೆಯೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿದರು.
ಶ್ರೀ ಬಸವಾನಂದಸ್ವಾಮೀಜಿ, ಶ್ರೀ ರಾಮರೂಢಸ್ವಾಮೀಜಿ, ಶ್ರೀಗಿರಿ ತಪೋವನ ಮಳವಳ್ಳಿ ಸ್ವಾಮೀಜಿ ಹಾಗೂ ವೇದವತಿ ಮಾತಾಜಿರವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು  
ಶಾಸಕ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು, ಜೆಡಿಎಸ್ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಮಂಡ್ಯ ಜಿಲ್ಲಾ ಗಂಗಾ ಮತಸ್ಥರ ಸಂಘದ ಜಿಲ್ಲಾಧ್ಯಕ್ಷ ಎಸ್.ರಮೇಶ್, ಕಾಡುಕೊತ್ತನಹಳ್ಳಿ ಗ್ರಾಪಂ ಅಧ್ಯಕ್ಷ ಕೆ.ಎಸ್. ದಯಾನಂದ, ಗ್ರಾಪಂ ಮಾಜಿ ಅಧ್ಯಕ್ಷ ಕೆ.ಎಂ.ಪುಟ್ಟಸ್ವಾಮಿ, ಉಪಾಧ್ಯಕ್ಷರಾದ ಜಯಲಕ್ಷ್ಮಿ, ಸದಸ್ಯರಾದ ವೀರಭದ್ರ, ಚಂದ್ರಕಲಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು