ಭಾರತಿನಗರದಲ್ಲಿ ಅತ್ಯಾಚಾರ ವಿರೋಧಿ ಆಂದೋಲನ

-ಟಿ.ಬಿ.ಸಂತೋಷ ಮದ್ದೂರು

ಮದ್ದೂರು : ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಖಂಡಿಸಿ ತಾಲ್ಲೂಕಿನ ಕೆ.ಎಂ.ದೊಡ್ಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಅತ್ಯಾಚಾರ ವಿರೋಧಿ ಆಂದೋಲನ ಜರುಗಿತು.
ಕೆ.ಎಂ.ದೊಡ್ಡಿಯ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿ ಘೋಷಣೆಗನ್ನು ಕೂಗಿ ಕಾಲ್ನಡಿಗೆಯಲ್ಲಿ ಜಾಥ ಮೂಲಕ ಬಂದು ಭಾರತಿ ಕಾಲೇಜು ಮುಂಭಾಗದಲ್ಲಿ ಅತ್ಯಾಚಾರಿ ವಿರೋಧಿ ಆಂದೋಲನ ಸಭೆ ನಡೆಸಿದರು.
ಇದೇ ಸಂದರ್ಭದಲ್ಲಿ ಜನಶಕ್ತಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮಲ್ಲಿಗೆ ಮಾತನಾಡಿ, ಎಲ್ಲೆಡೆ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿರುವುದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಸರ್ಕಾರವು ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಲ್ಲದೇ ಅತ್ಯಾಚಾರಿಗಳಿಗೆ ಪ್ರತ್ಯೇಕ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದರು. 
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ವೆಂಕಟೇಶ್, ವಕೀಲರಾದ ಬಿ.ಟಿ.ವಿಶ್ವನಾಥ್, ಸಾಮಾಜಿಕ ಕಾರ್ಯಕರ್ತೆ ಗೌರಿ, ನಿವೃತ್ತ ಪ್ರಾಧ್ಯಾಪಕ ಎಂ.ವಿ ಕೃಷ್ಣ , ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮಹೇಶ್, ಗ್ರಾಪಂ ಸದಸ್ಯರಾದ ಲತಾ, ಮುಖಂಡರಾದ ಕರಡಕೆರೆ ಯೋಗೇಶ್, ಚಿಕ್ಕರಸಿನಕೆರೆ ಶಿವಲಿಂಗಯ್ಯ, ವಸಂತಮ್ಮ, ಗ್ರಾಪಂ ಸದಸ್ಯರಾದ ಶ್ರೀನಿವಾಸ, ಮಂಜುನಾಥ್, ಮತ್ತಿತರು ಇದ್ದರು. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು