ರಸ್ತೆ ಗುಂಡಿ ತಪ್ಪಿಸಲು ಹೋಗಿ ವಾಹನ ಸವಾರ ಬಿದ್ದು ಗಂಭೀರ ಗಾಯ

ವರದಿ-ಶಾರುಕ್ ಖಾನ್, ಹನೂರು

ಹನೂರು : ತಾಲ್ಲೂಕಿನ ಕೌದಳ್ಳಿ ಗ್ರಾಮದ ಸಮೀಪ ರಸ್ತೆ ಗುಂಡಿ ತಪ್ಪಿಸಲು ಹೋಗಿ ವಾಹನ ಸವಾರ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹೊಸದೊಡ್ಡಿ ಗ್ರಾಮದ ವೇಲು ಅಪಘಾತಕ್ಕೆ ಒಳಗಾದವರು.
ಕೌದಳ್ಳಿ ಗ್ರಾಮದಿಂದ ರಾಮಪುರದ ಮುಖ್ಯರಸ್ತೆಯಲ್ಲಿ ತೆರಳುವಾಗ ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ವ್ಯಕ್ತಿಯ ತಲೆಗೆ ತೀವ್ರ ಪೆಟ್ಟು ಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ವೇಲು ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು