ಭಾರತೀನಗರದ ಜನನಿ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾಚರಣೆ

 -ಟಿ.ಬಿ.ಸಂತೋಷ, ಮದ್ದೂರು

ಮದ್ದೂರು : ತಾಲೂಕಿನ ಭಾರತೀನಗರದಲ್ಲಿರುವ ಜನನಿ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. 

ಜೈ ಭುವನೇಶ್ವರಿ ಹಾಗೂ ಪಂಡಿತ್ ಜವಾಹಾರಲಾಲ್ ನೆಹರು ರವರ ಭಾವಚಿತ್ರಕ್ಕೆ ಪುμÁ್ಪರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಎಸ್.ಬೋರೇಗೌಡ ರವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ವಿದ್ಯೆಯನ್ನು ಬೋಧಿಸುವುದರ ಜೊತೆಗೆ ಅವರಿಗೆ ಸಂಸ್ಕಾರವನ್ನು ಕಲಿಸಬೇಕು. ಮಕ್ಕಳನ್ನು ಪಾಶ್ಚಿಮಾತ್ಯ ಸಂಸ್ಕøತಿಗೆ ಒಳಪಡಿಸದೆ ಭಾರತೀಯ ಸಂಸ್ಕøತಿಯನ್ನು ಕಲಿಸಬೇಕು ಎಂದರು, ಮಾಜಿ ಪ್ರಧಾನಿ ಪಂಡಿತ್ ನೆಹರೂ ರವರು ಮಕ್ಕಳನ್ನು ದೇವರೆಂದು  ಭಾವಿಸಿದ್ದರು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬಿಟ್ಟು ಮೊಬೈಲ್ ಫೋನ್‍ಗಳ ವ್ಯಾಮೋಹಗಳಿಗೆ ಬಲಿಯಾಗಿದ್ದಾರೆ. ಮಕ್ಕಳು ಸಮಾಜದಲ್ಲಿ ಉತ್ತಮ ಸತ್ಪ್ರಜೆಗಳಾ ಗಿ ರೂಪುಗೊಳ್ಳಬೇಕಾದರೆ ಅವರುಗಳು ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದರು. 

ಈ ವೇಳೆ ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿನಿ ಶೋಭಿತ ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 

ಜನನಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜಗದೀಶ್, ಮುಖ್ಯ ಶಿಕ್ಷಕಿ ಸೌಮ್ಯ, ಸಹ ಶಿಕ್ಷಕಿಯರಾದ ಕುಸುಮ, ರಶ್ಮಿ, ಜವರೇಗೌಡ ಮುಂತಾದವರು ಉಪಸ್ಥಿತರಿದ್ದರು. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು