ಮಳೆಯಿಂದ ಮನೆ ಕುಸಿದು ಅಪಾರ ಪ್ರಮಾಣದ ನಷ್ಟ : ಪರಿಹಾರಕ್ಕಾಗಿ ಒತ್ತಾಯ
ನವೆಂಬರ್ 27, 2022
ಮದ್ದೂರು : ಕಳೆದೆರಡು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅರೆಚಾಕನಹಳ್ಳಿ ಗ್ರಾಮದಲ್ಲಿ ಮನೆಯೊಂದು ಕುಸಿದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ತಾಲ್ಲೂಕಿನ ಅರೆಚಾಕನಹಳ್ಳಿ ಗ್ರಾಮದ ಚಿಕ್ಕೋಳಮ್ಮ ಎಂಬುವವರ ಮನೆ ಮಳೆಯಿಂದಾಗಿ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಇದರಿಂದಾಗಿ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು, ಆಹಾರ ಪದಾರ್ಥಗಳು ಸಂಪೂರ್ಣ ನಾಶಗೊಂಡಿವೆ. ಕೂಡಲೇ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಪರಿಹಾರವನ್ನು ಕೊಡಿಸಿ ಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
0 ಕಾಮೆಂಟ್‌ಗಳು