ಬೈಕ್‍ಗೆ ಟೆಂಪೋ ಡಿಕ್ಕಿ ; ಇಬ್ಬರು ಎಎಸ್‍ಐ ಗಳಿಗೆ ಗಂಭೀರ ಗಾಯ

 ಚಾಮರಾಜನಗರ : ಬೈಕ್‍ಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಎಸ್‍ಐಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಚಾಮರಾಜನಗರ ತಾಲೂಕಿನ ಉಡಿಗಾಲ ಸಮೀಪ ನಡೆದಿದೆ.
ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‍ಐ ಮಲ್ಲಿಕಾರ್ಜುನ ಹಾಗೂ ತೆರಕಣಾಂಬಿ ಪೊಲೀಸ್ ಠಾಣೆಯ ಎಎಸ್‍ಐ   ಮಹದೇವಸ್ವಾಮಿ ಗಾಯಗೊಂಡವರು.
ಬಾಳೆಕಾಯಿ ತುಂಬಿಕೊಂಡು ತೆರಳುತ್ತಿದ್ದ ಪಿಕ್ ಅಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎನ್ನಲಾಗಿದೆ. ಗಾಯಗೊಂಡ ಇಬ್ಬರೂ ಎಎಸ್‍ಐ ಗಳನ್ನು ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು