ಶಾಲಾ ಕಟ್ಟಡದ ಮೇಲೆ ಮಧ್ಯಪಾನ ಮಾಡಿದ ಪ್ರಕರಣ : ಅಕ್ರಮ ಮಧ್ಯ ಮಾರಾಟಗಾರರಿಗೆ ಎಚ್ಚರಿಕೆ ನೀಡಿದ ಪೊಲೀಸರು

-ಶಾರುಕ್ ಖಾನ್, ಹನೂರು

ಹನೂರು : ತಾಲ್ಲೂಕಿನ ಎಲ್ಲೆಮಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಟ್ಟಡದ ಮೇಲೆ ಕೆಲವು ದುಷ್ಕರ್ಮಿಗಳು ಇತ್ತೀಚೆಗೆ ಮಧ್ಯಪಾನ ಮಾಡಿ ಶಾಲೆಯ ಆಸ್ತಿಗೆ ಧಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹನೂರು ಪೊಲೀಸರು ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದ ಸುತ್ತಮುತ್ತಲಿನಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುತ್ತಿರುವ ಕಾರ ಣ ವ್ಯಸನಿಗಳು ಕುಡಿಯಲು ಶಾಲಾ ಆವರಣವನ್ನೇ ಆಯ್ಕೆ ಮಾಡಿಕೊಂಡಿರುವುದು ಅಪರಾಧ. ಗ್ರಾಮದಲ್ಲಿ ಅಕ್ರಮವಾಗಿ ಯಾರೇ ಮದ್ಯ ಮಾರಾಟ ಮಾಡುತ್ತಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಅಧಿಕಾರಿಗಳು ಬಳಿಕ ವಿಧ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಧೈರ್ಯ ಹೇಳಿ ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸುವುದಾಗಿ ಹೇಳಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಕೌಸರ್ ಪಾಶ, ಎಸ್‍ಡಿಎಂಸಿ ಅಧ್ಯಕ್ಷ ಅನ್ಸರ್ ಪಾಶ, ಡಿವೈಎಸ್‍ಇ ಮೋಹನ್ ಕುಮಾರ್, ಅಬಕಾರಿ ಇನ್ಸ್‍ಪೆಕ್ಟರ್ ಉಮಾ ಶಂಕರ್, ಪಿಎಸ್‍ಐ ಶ್ರೀಧರ್, ರಮೇಶ್,. ರಾಜೇಶ್, ಸೊಮ್ಮಣ್ಣ ಇತರರು ಇದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು