ಶಾಸಕ ತನ್ವೀರ್ ಸೇಠ್‍ಗೆ ಕೊಲೆ ಬೆದರಿಕೆ : ಕಾಂಗ್ರೆಸ್ ಮುಖಂಡರಿಂದ ಪೊಲೀಸ್ ಆಯುಕ್ತರಿಗೆ ದೂರು

ಮೈಸೂರು : ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸುವುದಾಗಿ ಹೇಳಿಕೆ ನೀಡಿದ್ದ ಶಾಸಕ ತನ್ವೀರ್ ಸೇಠ್‍ಗೆ ಕೊಲೆ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮಕ್ಕೆ ಕಾಂಗ್ರೆಸ್ ಮುಖಂಡರು ಇಂದು ದೂರು ನೀಡಿದ್ದಾರೆ.
ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ ಭಜರಂಗದಳ ಕಾರ್ಯಕರ್ತ ರಘು ಎಂಬ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿ, ಟಿಪ್ಪು ಸುಲ್ತಾನರ ಒಂದಡಿಯ ಪ್ರತಿಮೆಯನ್ನೂ ನಿರ್ಮಿಸಲು ನಾವು ಬಿಡುವುದಿಲ್ಲ. ಶಾಸಕ ತನ್ವೀರ್ ಸೇಠ್ 100 ಅಡಿ ಪ್ರತಿಮೆ ನಿರ್ಮಿಸಲು ಮುಂದಾದರೆ ಅಂತಿಮ ಯಾತ್ರೆಗೆ ಸಿದ್ದರಾಗಿ ಎಂದು ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗುರುವಾರ ಬೆಳಿಗ್ಗೆ ಕಾಂಗ್ರೆಸ್ ಎನ್‍ಆರ್ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೈಯದ್ ಫಾರೂಖ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಇಕ್ಬಾಲ್ ನೇತೃತ್ವದಲ್ಲಿ ಸುಮಾರು 15ಕ್ಕೂ ಹೆಚ್ಚು ಮುಖಂಡರು ಮೈಸೂರು ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ ಕೊಲೆ ಬೆದರಿಕೆ ಹಾಕಿರುವ ರಘು ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಈಗಾಗಲೇ ವರ್ಷದ ಹಿಂದೆ ದುಷ್ಕರ್ಮಿಗಳ ಚಾಕು ಇರಿತಕ್ಕೆ ಒಳಗಾಗಿ ಚೇತರಿಸಿಕೊಂಡಿರುವ ಶಾಸಕ ತನ್ವೀರ್ ಸೇಠ್ ಅವರಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು. 



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು