ಎಲ್ಲರಿಗೂ ಮೀಸಲಾತಿ ಹೆಚ್ಚಳ ಸಾಧ್ಯವಿಲ್ಲ : ಮುಖ್ಯಮಂತ್ರಿಗಳಿಗೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಸಲಹೆ
ನವೆಂಬರ್ 28, 2022
ಮೈಸೂರು : ಶೋಷಿತ ಸಮುದಾಯಗಳನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಮುನ್ನಲೆಗೆ ತರುವ ಉದ್ದೇಶದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಸಲಾತಿಯನ್ನು ಜಾರಿಗೊಳಿಸಿದ್ದರು. ಆದರೆ ಎಲ್ಲರಿಗೂ ಮೀಸಲಾತಿ ಹೆಚ್ಚಳ ಸಾಧ್ಯವಿಲ್ಲ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದರು. ನಂಜನಗೂಡು ನಗರದ ಶ್ರೀ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ವೇಳೆ ಭಾಗವಹಿಸಿ ಮಾತನಾಡಿದ ಅವರು, ಎಲ್ಲರಿಗೂ ಮೀಸಲಾತಿ ಹೆಚ್ಚಳ ಸಾಧ್ಯವಿಲ್ಲ ಶೋಷಿತ ಸಮುದಾಯಗಳನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಲಾತಿಯನ್ನು ಜಾರಿಗೊಳಿಸಿದರು. ಆದರೆ, ಈಗ ಇತರೆ ಸಮುದಾಯಗಳೂ ಮೀಸಲಾತಿ ಹೆಚ್ಚಳ ಮಾಡುವಂತೆ ಒತ್ತಡ ಹಾಕುತ್ತಿದ್ದು, ಎಲ್ಲರಿಗೂ ಮೀಸಲಾತಿ ಹೆಚ್ಚಳ ಮಾಡಲು ಒತ್ತಡ ತರುತ್ತಿದ್ದಾರೆ. ಇದು ಸಾಧ್ಯವಿಲ್ಲ ಎಂದು ಹೇಳಿದರು. ರಾಜಕಾರಣಕ್ಕೆ ಬಂದು ನಾಲ್ಕು ದಶಕಗಳು ಕಳೆದಿವೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಮಂತ್ರಿಯಾಗಿದ್ದೇನೆ. ಕೆಲವು ಚುನಾವಣೆಯಲ್ಲಿ ಸೋಲನ್ನು ಕಂಡಿದ್ದೇನೆ. ಸೋತಾಗ ಕುಗ್ಗಿಲ್ಲ , ಗೆದ್ದಾಗ ಹಿಗ್ಗಿಲ್ಲ ಎಂದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾಜದ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗುದುಕೊಂಡು ಕೆಲಸ ಮಾಡುತಿದ್ದಾರೆ. ಪರಿಶಿಷ್ಟ ಸಮುದಾಯಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ಮೂಲಕ ಸರ್ವರನ್ನು ಒಳಗೊಳ್ಳುವಂತಹ ಆಡಳಿತ ನೀಡಿದ್ದಾರೆ. ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಾಲಯ ಪ್ರವಾಹ ಬಂದಾಗ ಕಬಿನಿ ಜಲಾಶಯದ ನೀರು ನುಗ್ಗಿ ಅಪಾರ ಹಾನಿವುಂಟಾಗುತ್ತಿದೆ. ಆದ್ದರಿಂದ ಕೂಡಲೆ ಕಬಿನಿ ಜಲಾಶಯಕ್ಕೆ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಮುಂಖ್ಯಮತ್ರಿಗಳ ಬಳಿ ಮನವಿ ಮಾಡಿದರು. ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಮಾತನಾಡಿ ಕಳೆದ ಮೂರು ವರ್ಷಗಳಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೊಸ ಕಾಮಗಾರಿ ಹಾಗೂ ಹಳೆ ಕಾಮಗಾರಿ ಸೇರಿ ಸುಮಾರು 5,700 ಕೋಟಿ ರೂಗಳ ಕಾಮಗಾರಿಯನ್ನು ಕಾವೇರಿ ನೀರಾವರಿ ನಿಗಮದಿಂದ ಕೈಗೆತ್ತಿಕೊಂಡಿರುತ್ತೇವೆ 2 ವರ್ಷಗಳಿಂದ ಹೆಚ್ಚು ಮಳೆ ಇರುವುದರಿಂದ 7 ಜಿಲ್ಲೆಯಲ್ಲಿ 818 ಕೆರೆ ಕಟ್ಟೆ ದುರಸ್ತಿ ಕಾರ್ಯ ನಡೆದಿದೆ ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ಕೊಡುವಂತ ಕೆಲಸ ಮಾಡುತ್ತಿದೆ. ಕಳೆದ 40 ವರ್ಷ ಹೋರಾಟ ಮಾಡುತ್ತಿರುವ ಎಸ್ಸಿ, ಎಸ್ಟಿ ಜನಾಂಗದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಕೆಲಸ ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು. ಶಾಸಕರಾದ ಹರ್ಷವರ್ಧನ್ ಅವರು ಮಾತನಾಡಿ, ನಂಜನಗೂಡು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಸಾಕಷ್ಟು ಕಾಮಗಾರಿಗಳನ್ನು ಈ 3 ವರ್ಷ ಮಾಡಲಾಗಿದೆ. ಪ್ರಮುಖವಾಗಿ ನುಗು ಜಲಾಶಯದ ಅಭಿವೃದ್ಧಿ ಯಿಂದ ನಂಜನಗೂಡಿನ 20 ಕೆರೆಗಳು ತುಂಬಲಿವೆ. ಇದರಿಂದ ಜಲಸಂಪನ್ಮೂಲ ಹೆಚ್ಚಲಿದ್ದು, ಮುಂದಿನ ದಿನಗಳಲ್ಲಿ ನಂಜನಗೂಡಿನ ನದಿಯಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಸುಮಾರು 50 ಕೋಟಿ ವೆಚ್ಚಕ್ಕಾಗಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
0 ಕಾಮೆಂಟ್‌ಗಳು