ಪಾಂಡವಪುರ ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಕನಕದಾಸರ ಜಯಂತಿಯಲ್ಲಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಯಶವಂತ್ ಕುಮಾರ್ ಮಾತನಾಡಿದರು.
ಪಾಂಡವಪುರ : ತಾಲ್ಲೂಕಿನ ಕುರುಬ ಸಮುದಾಯ ಸೇರಿದಂತೆ ಹಿಂದುಳಿದ ಸಮುದಾಯಗಳ ಅಪಾರ ಬೆಂಬಲದಿಂದ ಈ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕನಾಗಲು ಸಾಧ್ಯವಾಯಿತು ಎಂದು ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಡೆದ ಭಕ್ತ ಕನಕದಾಸರ ಜಯಂತಿ ಹಾಗೂ ಒನಕೆ ಒಬವ್ವ ಜಯಂತಿ ಆಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು
ನನಗೆ ಜಾತಿ ವ್ಯವಸ್ಥೆಯ ಬಗ್ಗೆ ನಂಬಿಕೆ ಇಲ್ಲ. ನಾನೊಬ್ಬ ಒಕ್ಕಲಿಗ ಜಾತಿಯಲ್ಲಿ ಹುಟ್ಟಿದ್ದರೂ ನನ್ನ ಸಮುದಾಯದವರೇ ನನ್ನನು ಹೆಚ್ಚು ವಿರೋಧ ಮಾಡುತ್ತಾರೆ. ತಾಲ್ಲೂಕಿನ ಕುರುಬ ಸಮುದಾಯ ಸೇರಿದಂತೆ ಇತರೆ ಸಮುದಾಯಗಳು ನನ್ನನ್ನು ಮನೆಯ ಮಗನ ರೀತಿ ಆಶೀರ್ವಾದ ಮಾಡಿದ್ದಾರೆ. ಇವರ ಆಶೀರ್ವಾದದಿಂದ ಶಾಸಕನಾಗಿ, ಸಂಸದರಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ ಎಂದರು.
ಭಕ್ತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಇಂತಹ ಮಹಾನ್ ನಾಯಕರು ಎಲ್ಲರಿಗೂ ಆದರ್ಶವಾಗಬೇಕು ಎಂದರು.
ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಎಂ.ಸಿ.ಯಶ್ವಂತ್‍ಕುಮಾರ್ ಮಾತನಾಡಿ, ಶಾಸಕ ಸಿ.ಎಸ್.ಪುಟ್ಟರಾಜು ಅವರು ಜನಾನುರಾಗಿ ನಾಯಕರು, ಕನಕದಾಸರು, ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಮುನ್ನಡೆಯುತ್ತಿದ್ದಾರೆ. ಕುರುಬ ಸಮುದಾಯದ ನನ್ನನ್ನು ಸಾಮಾನ್ಯ ಕ್ಷೇತ್ರದಿಂದ ತಾಪಂ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿ, ತಾಪಂ ಅಧ್ಯಕ್ಷರಾಗಿ ಮಾಡಿದರು. ಆ ನಂತರದಲ್ಲಿ ಪಿಎಲ್‍ಡಿ ಬ್ಯಾಂಕ್‍ನ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಗೆಲ್ಲಿಸಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರನ್ನಾಗಿಯೂ ಮಾಡಿದ್ದಾರೆ. ಹೀಗಾಗಿ ಹಿಂದುಳಿದ, ಬಡವರ, ದೀನದಲಿತರ ಪರವಾಗಿ ಎಲ್ಲಾ ವರ್ಗದ ಜನರಿಗೂ ರಾಜಕೀಯದ ಅಧಿಕಾರ ದೊರಕಿಸಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.
ಪಾಂಡವಪುರ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆದ ಕನಕ ಜಯಂತಿ ಮತ್ತು ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಪಾಂಡವಪುರ ಉಪ ವಿಭಾ ಗದ ನೂತನ ಉಪ ವಿಭಾಗಾಧಿಕಾರಿ ನೋಂಗ್ ಜೈ ಮೊಹಮ್ಮದ್ ಅಲಿ ಅಕ್ರಂಪಾಷ ಅವರನ್ನು ಗೌರವಿಸಲಾಯಿತು.
ನಿವೃತ್ತ ಶಿಕ್ಷಕ ಶಿವರಾಜು ಕನಕದಾಸರ ಕುರಿತು ಉಪನ್ಯಾಸ ನೀಡಿದರು. ಸಮಾರಂಭದಲ್ಲಿ ಪುರಸಭೆ ಅಧ್ಯಕ್ಷೆ ಅರ್ಚನಚಂದ್ರು, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ಉಪವಿಭಾಗಾಧಿಕಾರಿ ನೋಂಗ್ ಜೈ ಮೊಹಮ್ಮದ್ ಅಲಿ ಅಕ್ರಂಪಾಷ, ತಹಶೀಲ್ದಾರ್ ಕುಮಾರ್, ಇಓ ಲೋಕೇಶ್‍ಮೂರ್ತಿ, ಉಪ ತಹಶೀಲ್ದಾರ್ ವರುಣ್, ಬಿಇಓ ಲೋಕೇಶ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎ.ಅರವಿಂದ್, ಸಿಡಿಪಿಓ ನಟರಾಜು, ಕುರುಬರ ಸಂಘದ ಅಧ್ಯಕ್ಷ ಡಿ.ಹುಚ್ಚೇಗೌಡ, ಕನಕ ಯುವ ಬಳಗದ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಕೃಷ್ಣಅಣ್ಣಯ್ಯ, ಜಯಲಕ್ಷ್ಮಿ, ತಾಪಂ ಮಾಜಿ ಸದಸ್ಯೆ ಮಂಗಳ ನವೀನ್‍ಕುಮಾರ್, ಕುರುಬರ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಬಿ.ರೇವಣ್ಣ, ಜೆಡಿಎಸ್ ಮುಖಂಡ ಟೌನ್ ಚಂದ್ರು, ಕರಿಯಪ್ಪ, ಗೋಪಾಲ್ ಸೇರಿದಂತೆ ಹಲವರು ಹಾಜರಿದ್ದರು.
0 ಕಾಮೆಂಟ್‌ಗಳು