ಮೈಸೂರು ಮಂಡಿ ಮೊಹಲ್ಲಾದಲ್ಲಿ ಕನ್ನಡ ರಾಜ್ಯೋತ್ಸವ : ಪುನೀತ್ ಸ್ಮರಣಾರ್ಥ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ, ಅನ್ನ ದಾಸೋಹ

ಮೈಸೂರು : ನಗರದ ಮಂಡಿಮೊಹಲ್ಲಾದ ಅಕ್ಬರ್ ರಸ್ತೆಯಲ್ಲಿರುವ ತಾಯಿ ಭುವನೇಶ್ವರಿ ಯುವಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಪುನೀತ್ ರಾಜಕುಮಾರ್ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ದಾಸೋಹ ಹಾಗೂ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯಿತು.
ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್ ಮತ್ತಿತರ ಶಾಲಾ ಪರಿಕರಗಳನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಅನ್ನ ದಾಸೋಹ ಕಾರ್ಯಕ್ರಮವೂ ನಡೆಯಿತು.

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಮೈಸೂರು ಸಿಟಿ ಕೋ ಆಪರೇಟೀವ್ ಬ್ಯಾಂಕ್ ಉಪಾಧ್ಯಕ್ಷೆ ಹೇಮಾ ಅವರು ಮಾತನಾಡಿ, ಕನ್ನಡ ನಾಡಿನ ಕಣ್ಮಣಿ ಪುನೀತ್ ರಾಜಕುಮಾರ್ ಅವರು ನಮ್ಮನ್ನಗಲಿ ಒಂದು ವರ್ಷವಾದರೂ ಅವರ ಸೇವಾ ಕಾರ್ಯಗಳು ಇನ್ನೂ ಜನ ಮಾನಸದಲ್ಲಿ ಉಳಿದಿವೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿಧ್ಯಾರ್ಥಿಗಳ ಶಿಕ್ಷಣಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಸ್ಮರಿಸಲು ನಾವು ಇಂದು 300ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿದ್ದೇವೆ. ಮುಂದೆಯೂ ಪುನೀತ್ ಹೆಸರಲ್ಲಿ ಸಾಧ್ಯವಾದಷ್ಟೂ ಶೈಕ್ಷಣಿಕ ಸೇವೆಯನ್ನು ಮಾಡುತ್ತೇವೆ ಎಂದರು. 

ಮೈಸೂರು ಚಾಮರಾಜನಗರ ಜಿಲ್ಲೆಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ರವಿಕುಮಾರ್ ಅಲಿಯಾಸ್ ರಾಜಕೀಯ ರವಿ ಮಾತನಾಡಿ, ತಾಯಿ ಭುವನೇಶ್ವರಿ ಯುವಕ ಸಂಘದ ವತಿಯಿಂದ 35 ವರ್ಷಗಳಿಂದಲೂ ಅನ್ನ ದಾಸೋಹ ಸೇರಿದಂತೆ ಹಲವಾರು ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದೇವೆ. ನಮ್ಮ ಸಂಘದ ಸದಸ್ಯರು ಅತ್ಯಂತ ಕ್ರಿಯಾಶೀಲರಾಗಿ ಜನಸೇವೆಯಲ್ಲಿ ತೊಡಗಿದ್ದಾರೆ. ಈ ವರ್ಷ ಪುನೀತ್ ಸ್ಮರಣಾರ್ಥ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡಿದ್ದೇವೆ ಮುಂದೆಯೂ ಸೇವಾಕಾರ್ಯ ಮುಂದುವರಿಸುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಸಂಘಟನೆಯ ಮುಖಂಡರಾದ ಪ್ರಜ್ವಲ್, ಜಯಂತ್, ಕಿರಣ್, ಯಶ್ವಂತ್, ಮಂಜು, ಚಂದ್ರು, ಮಧುಸೂಧನ್ ಗೌಡ ಮುಂತಾದವರು ಇದ್ದರು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು