ಸಾಲ ನಿರಾಕರಣೆ : ಬ್ಯಾಂಕಿನಲ್ಲಿಯೇ ವಿಷ ಕುಡಿದ ರೈತ

ಮೈಸೂರು : ಬೆಳೆ ಸಾಲ ನಿರಾಕರಿಸಿದ ಹಿನ್ನೆಲೆ ರೈತನೊಬ್ಬ ಬ್ಯಾಂಕಿನಲ್ಲೇ ಕೀಟನಾಶಕ ಸೇವಿಸಿದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಹೊಸಹೊಳಲು ಗ್ರಾಮದಲ್ಲಿ ಸೋಮವಾರ ಮದ್ಯಾಹ್ನ ನಡೆದಿದೆ. 
ಹೊಸಹೂಳಲು ಗ್ರಾಮದ 73 ವರ್ಷದ ನಿಂಗೇಗೌಡ ಎಂಬವರೇ ವಿಷ ಸೇವಿಸಿದ ರೈತನಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಂಗೇಗೌಡ 4 ಎಕರೆ ಜಮೀನು ಹೊಂದಿದ್ದು, ಅಂತರ ಸಂತೆ ಗ್ರಾಮದ  ಕರ್ನಾಟಕ ಗ್ರಾಮೀಣ ಬ್ಯಾಂಕ್‍ನಲ್ಲಿ ಕಬ್ಬಿನ ಬೆಳೆ ಸಾಲಕ್ಕೆ ಅರ್ಜಿ ಹಾಕಿದ್ದರು. ಒಂದು ತಿಂಗಳ ನಂತರ ಬ್ಯಾಂಕಿನವರು ಸಿಬಿಲ್ ರೇಟ್ ಕಡಿಮೆ ಇದೆ ನಿಮಗೆ ಸಾಲ ಕೊಡಲು ಬರುವುದಿಲ್ಲ ಎಂದು ತಿಳಿಸಿ ನೋಟಿಸ್ ಕೊಟ್ಟ ಕಾರಣ ಬೇಸರಗೊಂಡ ನಿಂಗೇಗೌಡ ಬ್ಯಾಂಕಿನಲ್ಲಿಯೇ ವಿಷ ಸೇವಿಸಿ ಅಸ್ವಸ್ಥರಾದರು.
ಕೂಡಲೇ ಬ್ಯಾಂಕಿನ ಸಿಬ್ಬಂದಿ ನಿಂಗೇಗೌಡರ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದರು. ನಂತರ ಅಸ್ವಸ್ಥಗೊಂಡ ನಿಂಗೇಗೌಡರನ್ನು ಎಚ್.ಡಿ. ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು