ಇದುವೆಗೂ ಆಡಳಿತ ನಡೆಸಿದ ಸರ್ಕಾರಗಳು ಸಂವಿಧಾನಕ್ಕೆ ಬದ್ಧವಾಗಿಲ್ಲ : ಗೋಪಿನಾಥ್

ಪಾಂಡವಪುರದಲ್ಲಿ ಜೈ ಭೀಮ್ ಜನ ಜಾಗೃತಿ ಜಾಥಾಕ್ಕೆ ಅದ್ಧೂರಿ ಸ್ವಾಗತ

ಪಾಂಡವಪುರ : ರಾಜ್ಯದಲ್ಲಿ ಇದುವರೆಗೂ ಆಡಳಿತ ನಡೆಸಿದ ಯಾವುದೇ ಸರ್ಕಾರಗಳು ಸಂವಿಧಾನಕ್ಕೆ ಬದ್ಧವಾಗಿಲ್ಲ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಗೋಪಿನಾಥ್ ಹೇಳಿದರು.
ಪಟ್ಟಣದ ಐದು ದೀಪದ ವೃತ್ತದಲ್ಲಿ ಬಹುಜನ ಸಮಾಜ ಪಕ್ಷದ ಜೈ ಭೀಮ್ ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸಭಿಕರನ್ನು ಉದ್ಧೇಶಿಸಿ ಅವರು ಮಾತನಾಡಿದರು.
73 ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸಿದ ಸರ್ಕಾರಗಳು ಸಂವಿಧಾನದ ಆಶಯಗಳನ್ನು ಯಥಾವತ್ತಾಗಿ ಜಾರಿ ಮಾಡದ ಕಾರಣ ಎಸ್‍ಸಿ, ಎಸ್‍ಟಿ, ಓಬಿಸಿ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಜನಾಂಗಕ್ಕೆ ಅನ್ಯಾಯವಾಗುತ್ತಿದೆ. ಇವರೆಲ್ಲರೂ ಅನೇಕ ಸಮಸ್ಯೆಗಳಿಗೆ ಸಿಲುಕಿದ್ದಾರೆ. 
ಈ ನಿಟ್ಟಿನಲ್ಲಿ ಸಂವಿಧಾನ ಹಕ್ಕು ಮತ್ತು ಅಧಿಕಾರಗಳ ಬಗ್ಗೆ ಎಸ್‍ಸಿ, ಎಸ್‍ಟಿ, ಓಬಿಸಿ ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಜಾಥಾ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಸಂವಿಧಾನವನ್ನೇ ತನ್ನ ಪ್ರಣಾಳಿಕೆಯನ್ನಾಗಿ ಮಾಡಿಕೊಂಡಿರುವ ಬಹುಜನ ಸಮಾಜ ಪಕ್ಷವನ್ನು ಬೆಂಬಲಿಸುವಂತೆ ಕೋರಿದರು.
ಕೆ.ಆರ್.ಪೇಟೆ ಮೂಲಕ ಪಾಂಡವಪುರಕ್ಕೆ ಆಗಮಿಸಿದ ಜೈ ಭೀಮ್ ಜನಜಾಗೃತಿ ಜಾಥಾವನ್ನು ಬಿಎಸ್‍ಪಿ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ಯೋಗನಂದ ಗೌಡ ಪಟ್ಟಣದ ಐದು ದೀಪದ ವೃತ್ತದ ಬಳಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬಿಎಸ್‍ಪಿ ಮಂಡ್ಯ ಜಿಲ್ಲೆ ಅಧ್ಯಕ್ಷರಾದ ಶಿವಶಂಕರ್, ಮುಖಂಡರಾದ ಚಿಕ್ಕ ಆಯರಹಳ್ಳಿ ಪ್ರಸಾದ್, ಮುರುಗನ್, ಮಹದೇವ, ಕುಮಾರ್, ರವಿ ಗೌಡ, ಶಿವಕುಮಾರ್, ಸುದರ್ಶನ್, ಗಂಗಣ್ಣ, ಕುಮಾರ್, ಬಸವರಾಜು ಇನ್ನಿತರರು ಇದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು