ಅದ್ಧೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ : ಕನ್ನಡಪರ ಹೋರಾಟಗಾರು, ಸಾಹಿತಿಗಳು, ಲೇಖಕರು, ಪತ್ರಕರ್ತರಿಗೆ ಸನ್ಮಾನ

ಮೈಸೂರು : ಕರ್ನಾಟಕ ಏಕೀಕರಣಕ್ಕಾಗಿ ದುಡಿದವರ ಸಂಖ್ಯೆ ಅಸಂಖ್ಯಾತ. ಡೆಪ್ಯೂಟಿ ಚೆನ್ನಬಸಪ್ಪ ಮತ್ತು ವೆಂಕಟ ರಂಗೋಕಟ್ಟಿ ಅವರಂತಹ ಮಹಾನ್ ಕನ್ನಡಿಗರಿಂದ ಪ್ರಾರಂಭವಾದ ಕರ್ನಾಟಕ ಏಕೀಕರಣ ಚಳುವಳಿ ಅನಂತರ ಸಾವಿರಾರು ಜನರ ಅವಿರತ ಹೋರಾಟವಾಗಿ ರೂಪುಗೊಂಡದ್ದು ಭವ್ಯ ಇತಿಹಾಸ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ನಗರದ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಮಂಗಳವಾರ ಜಿಲ್ಲಾಡಳಿತದ ವತಿಯಿಂದ ನಡೆದ  67 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಬಾವುಟ ಧ್ವಜಾರೋಹಣ ನೆರವೇರಿಸಿ ಕನ್ನಡ ಹೋರಾಟಗಾರರಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಕರ್ನಾಟಕ ಏಕೀಕರಣ ಮತ್ತು ನಾಮಕರಣದ ಸುದೀರ್ಘ ಹೋರಾಟದ ಫಲವಾಗಿ, 1956ರ ನವೆಂಬರ್ 1ರಂದು ಹೊಸ ರಾಜ್ಯ ಅಸ್ತಿತ್ವಕ್ಕೆ ಬಂದಿತು. ಆದರೆ ಕನ್ನಡ ನಾಡನ್ನು ಮೈಸೂರು ರಾಜ್ಯವೆಂದೇ ಕರೆಯಲಾಗುತ್ತಿತ್ತು.
ಕನ್ನಡನಾಡು ಏಕೀಕರಣಗೊಂಡ ಬಗ್ಗೆ ಇರುವ ದೀರ್ಘ ಚರಿತ್ರೆಯಂತೆ ‘ಕರ್ನಾಟಕ’ ಎಂಬ ಹೆಸರಿನ ನಾಮಕರಣಕ್ಕೂ ತನ್ನದೇ ಆದ ಚರಿತ್ರೆ ಇದೆ. ಅನೇಕರ ಒತ್ತಾಸೆಯಂತೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಡಿ.ದೇವರಾಜ ಅರಸುರವರ ಸಮ್ಮುಖದಲ್ಲಿ 1973 ರ ನವೆಂಬರ್ 1 ರಂದು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಲಾಯಿತು ಎಂದು ವಿವರಿಸಿದರು.

ಭಾರತೀಯ ಭಾμÉ ಮತ್ತು ಸಾಹಿತ್ಯಗಳಲ್ಲಿ ಉನ್ನತ ಶ್ರೇಣಿಯಲ್ಲಿ ಇರುವ ಚೆಲುವ ಕನ್ನಡ ಭಾμÉಗೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಕರ್ನಾಟಕದ ಸ್ಥಾನ ಇಂದು ಭಾರತದ ಅಭಿವೃದ್ಧಿ ನಕ್ಷೆಯಲ್ಲಿ ಅಗ್ರ ಪಂಕ್ತಿಯಲ್ಲಿದೆ. ಭಾರತದ ಒಟ್ಟಾರೆ ಆರ್ಥಿಕ ವರಮಾನದಲ್ಲಿ ಕರ್ನಾಟಕದ್ದೇ ಸಿಂಹಪಾಲು. ಮಾಹಿತಿ ತಂತ್ರಜ್ಞಾನದ ದಿಗ್ಗಜರು ನಾವು. ಶೈಕ್ಷಣಿಕವಾಗಿ ರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿರುವ ನಾಡು ನಮ್ಮದು. ವಿಜ್ಞಾನಿಗಳ ಕರ್ಮಭೂಮಿ ನಮ್ಮ ಕರ್ನಾಟಕ.

ಕೆ.ಎಸ್. ನರಸಿಂಹಸ್ವಾಮಿ ಅವರು ತಮ್ಮ ಕವನದಲ್ಲಿ ಹೇಳಿರುವಂತೆ `ಕನ್ನಡವೇ ಪ್ರಾಣ ಪದಕ’ ವೆಂದು ನಾವು ಭಾವಿಸಿರುವುದು ನಿಜ. ಆದರೆ ನಮ್ಮ ಮಕ್ಕಳು ತಮ್ಮ ಭವಿಷ್ಯದ ಹಾದಿ ಕಂಡುಕೊಳ್ಳಲು ಭಾμÉಗಳು ನೆರವಾಗಬೇಕು. ನಾವು ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳುವುದರ ಜತೆಗೆ ಇತರ ಭಾμÉ, ಸಂಸ್ಕøತಿಗಳನ್ನು ನಮ್ಮದಾಗಿಸಿಕೊಳ್ಳಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಕನ್ನಡ ನಡು, ನುಡಿ, ನೆಲ, ಜಲ ಹೋರಾಟಗಳಲ್ಲಿ ಸೇವೆ ಸಲ್ಲಿಸಿದವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.
ಸಂಸದ ಪ್ರತಾಪ್ ಸಿಂಹ, ಶಾಸಕರಾದ ತನ್ವೀರ್ ಸೇಠ್, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್ ಇನ್ನಿತರರು ಇದ್ದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು