ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಅಪಾರ ನಷ್ಟ : ಪರಿಹಾರಕ್ಕಾಗಿ ಒತ್ತಾಯ
ನವೆಂಬರ್ 07, 2022
-ಟಿ.ಬಿ.ಸಂತೋಷ್ ಮದ್ದೂರು
ಮದ್ದೂರು : ತಾಲೂಕಿನ ಹೆಚ್.ಹೊಸಹಳ್ಳಿ ಗ್ರಾಮದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದು ಅಪಾರ ಪ್ರಮಾಣದಲ್ಲಿ ನಷ್ಟ ಸಂಭವಿಸಿದೆ. ಗ್ರಾಮದ ಸೌಮ್ಯ ಹಾಗೂ ವಿಜಯ್ ಕುಮಾರ್ ಎಂಬ ದಂಪತಿಗೆ ಸೇರಿದ್ದ ಮನೆಯ ಗೋಡೆಯು ಮಳೆಯಿಂದಾಗಿ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ನಾಶಗೊಂಡಿದ್ದು, ಸೌಮ್ಯ ವಿಜಯ್ ಕುಮಾರ್ ಕುಟುಂಬದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿ, ಸರ್ಕಾರದಿಂದ ಸಿಗುವಂತಹ ಪರಿಹಾರವನ್ನು ಕೊಡಿಸಿಕೊಡಬೇಕೆಂದು ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಅಸರೆಯಾಗಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.