ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ರವರ ಅತ್ತೆ ಗೌರಮ್ಮ ನಿಧನ

ಬೆಂಗಳೂರು : ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಅತ್ತೆ, ಧರ್ಮಪತ್ನಿ ರಾಧಾ ಸೋಮಶೇಖರ್ ಅವರ ತಾಯಿಯವರಾದ ಎಲ್. ಗೌರಮ್ಮ (83) ಅವರು ನಿಧನರಾಗಿದ್ದಾರೆ. 
ಲೇಟ್ ಎನ್. ನರಸಿಂಹಯ್ಯ, ಅವರ ಧರ್ಮಪತ್ನಿಯಾದ ಗೌರಮ್ಮ ಅವರು ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಮೃತರು ನಾಲ್ಕು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು, 11 ಮೊಮ್ಮಕ್ಕಳು, ಇಬ್ಬರು ಮರಿಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. 

ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪ್ರಾರ್ಥಿಸಿದ್ದಾರೆ. ಮೃತರ ಅಂತ್ಯಕ್ರಿಯೆ ನ.15ರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸುಮ್ಮನಹಳ್ಳಿ ಚಿತಾಗಾರದಲ್ಲಿ ನೆರವೇರಲಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು